ಡಿಕೆಶಿ ಬಳಿಕ ಮತ್ತೊಬ್ಬ ಸಚಿವರ ಮೇಲೆ ಐಟಿ ದಾಳಿ ಭೀತಿ

ಬೆಂಗಳೂರು, ಬುಧವಾರ, 2 ಆಗಸ್ಟ್ 2017 (15:13 IST)

ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿ ಬಳಿಕ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಸಚಿವರ ಮನೆ ಮೇಲೂ ಐಟಿ ದಾಳಿ ನಡೆಯುತ್ತಾ..? ಹೌದು ಎನ್ನುತ್ತಿದ್ದಾರೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್.


ಆದಾಯ ತೆರಿಗೆ ಇಲಾಖೆ ನನ್ನನ್ನೂ ಟಾರ್ಗೆಟ್ ಮಾಡಿದೆ. ಐಟಿ ಅಧಿಕಾರಿಗಳು ನನ್ನ ಮನೆಗೆ ಬಂದರೆ ಸ್ವಾಗತ ಕೋರುತ್ತೇನೆ ಎಂದು ಮಾಧ್ಯಮಗಳ ಜೊತೆ ಮಾತನಾಡಿರುವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಕೆಲ ಬಿಜೆಪಿ ನಾಯಕರೇ ನನ್ನ ಮನೆ ಮೇಲೆ ಐಟಿ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ದಾಳಿಯನ್ನ ಮುಂದುವರೆಸಿರುವ ಐಟಿ ಅಧಿಕಾರಿಗಳು ಮೈಸೂರಿನ ಡಿ.ಕೆ. ಶಿವಕುಮಾರ್ ಅವರ ಮಾವನ ಮನೆಯಲ್ಲೂ ಪರಿಶೀಲನೆ ನಡೆಸಿದೆ. ಡಿ.ಕೆ. ಶಿವಕುಮಾರ್ ಅವರ ಮಾವ ತಿಮ್ಮಯ್ಯ ಻ವರನ್ನ ವಿಚಾರಣೆಗೆ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಎಂಬಿಪಾಟೀಲ್ ಡಿಕೆಶಿವಕುಮಾರ್ ಕಾಂಗ್ರೆಸ್ Mbpatil Dkshivakumar Congress

ಸುದ್ದಿಗಳು

news

ಐಟಿ ದಾಳಿಗೆ ಪ್ರತಿಕ್ರಿಯೆ ನೀಡಬೇಡಿ: ಬಿಜೆಪಿ ನಾಯಕರಿಗೆ ಹೈಕಮಾಂಡ್ ಕಟ್ಟಾಜ್ಞೆ

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾಪ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕುರಿತಂತೆ ಯಾವುದೇ ಪ್ರತಿಕ್ರಿಯೆ ...

news

ಡಿಕೆಶಿ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ತೀವ್ರ ವಿಚಾರಣೆ

ಬೆಂಗಳೂರು, ರಾಮನಗರ ಮಾತ್ರವಲ್ಲ. ನವದೆಹಲಿಯಲ್ಲೂ ಡಿ.ಕೆ. ಶಿವಕುಮಾರ್`ಗೆ ಸಂಬಂಧಿತ ವ್ಯಕ್ತಿಗಳ ಮೇಲೆ ಐಟಿ ...

news

ಕಾಂಗ್ರೆಸ್ ಕಾರ್ಯಕರ್ತರ ಧರಣಿ: ಮೋದಿ, ಅಮಿತ್ ಶಾ ಪ್ರತಿಕೃತಿ ದಹನ

ಬೆಂಗಳೂರು: ಇಂಧ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಪ್ರಧಾನಿ ಮೋದಿ, ...

news

ಐಟಿ ದಾಳಿ ಬಗ್ಗೆ ಡಿ.ಕೆ. ಸುರೇಶ್ ಮೊದಲ ಪ್ರತಿಕ್ರಿಯೆ

ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ...

Widgets Magazine