ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ಧಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವವೂ ಜೋರಾಗಿಯೇ ಇದೆ. ಈ ನಡುವೆ ಬಿಜೆಪಿಗೆ ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬರುವುದು ಬಹುತೇಕ ಖಚಿತವಾಗಿದೆ. ಹಾಲಾಡಿ ಶೆಟ್ಟಿಯವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಪೈಪೋಟಿ ನಡೆಸಿತ್ತು. ಕೊನೆಗೆ ಇದೀಗ ಬಿಜೆಪಿ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಯಶಸ್ವಿಯಾಗಿದೆ ಎನ್ನಲಾಗಿದೆ.ನಾನು ಸದ್ಯದಲ್ಲೇ ಬಿಜೆಪಿ ಸೇರಲಿದ್ದೇನೆ ಎಂದು ಸ್ವತಃ ಶಾಸಕ ಶೆಟ್ಟಿ ಮಾಧ್ಯಮಗಳಿಗೆ