ಭ್ರಷ್ಟಾಚಾರ ವಿರೋಧಿಸುವ ಅಮಿತ್‌ಶಾಗೆ, ಬಿಎಸ್‌ವೈ ಜೈಲಿಗೆ ಹೋಗಿದ್ದು ಮರೆತಂತಿದೆ: ಪರಮೇಶ್ವರ್

ರಾಯಚೂರು:, ಶನಿವಾರ, 12 ಆಗಸ್ಟ್ 2017 (15:15 IST)

ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸಿಎಂ ಘೋಷಿತ ಅಭ್ಯರ್ಥಿ ಜೈಲಿಗೆ ಹೋಗಿರುವುದನ್ನು ಮರೆತಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರು ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ ಎನ್ನುತ್ತಾರೆ. ನೋಟ್‌ಬ್ಯಾನ್‌ನಿಂದ ದೇಶದ ಆರ್ಥಿಕತೆ ಕುಸಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದಿಂದಾಗಿ ರೈತರ ಸಾಯುತ್ತಿದ್ದರೂ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಿಡಿಗಾಸು ಅನುದಾನ ಬಿಚ್ಚಲಿಲ್ಲ ಎಂದು ಗುಡುಗಿದ್ದಾರೆ.
 
ಮಹದಾಯಿ, ಕಾವೇರಿ ನದಿ ವಿವಾದ ಸೇರಿದಂತೆ ಕೇಂದ್ರ ಸರಕಾರಕ್ಕೆ ಹಲವಾರು ಬಾರಿ ಪತ್ರ ಬರೆದು ನಿಯೋಗದೊಂದಿಗೆ ಭೇಟಿ ಮಾಡಿದ್ದರೂ ರಾಜ್ಯದ ಬಗ್ಗೆ ಕೇಂದ್ರ ಸರಕಾರ ಮಲತಾಯಿ ಧೋರಣೆ ತಳೆದಿದೆ. ಇದೀಗ ರಾಜ್ಯದ ಜನತೆಯ ಮತ ಕೇಳಲು ಆಗಮಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಶೂನ್ಯ: ಸಿಎಂ ವಾಗ್ದಾಳಿ

ರಾಯಚೂರು: ಪ್ರಧಾನಮಂತ್ರಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಮಾತ್ರ ಶೂನ್ಯ ಎಂದು ಸಿಎಂ ಸಿದ್ದರಾಮಯ್ಯ ...

news

ಯಾರೇ ಬಂದ್ರೂ ನಮ್ದೇ ಗೆಲುವು: ಅಮಿತ್ ಶಾಗೆ ಸಿಎಂ ಟಾಂಗ್

ರಾಯಚೂರು: ಯಾರೇ ಬಂದ್ರೂ ನಮ್ದೇ ಗೆಲುವು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ...

news

ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ: ಸಚಿವ ಡಿ.ಕೆ.ಶಿವಕುಮಾರ್

ರಾಯಚೂರು: ರಾಜ್ಯದ ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ...

news

ಭ್ರಷ್ಟ ಸರಕಾರವನ್ನು ಕಿತ್ತೊಗೆಯಿರಿ: ಸಿಎಂ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವಂತೆ ...

Widgets Magazine