ಕೈ ಕೊಟ್ಟ ಆರಿದ್ರಾ ಮಳೆ: ದನಗಳ ಪಾಲಾಯ್ತು ಬೆಳೆ

ಸೋಮವಾರ, 16 ಜುಲೈ 2018 (11:30 IST)



 
ರಾಜ್ಯಾದ್ಯಂತ ವರುಣನ ಆರ್ಭಟ ಜೊರಾಗಿದೆ. ಆದರೆ ನಿಗದಿತ ಸಮಯದಲ್ಲಿ ಬಾರದೇ ರೈತನ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಹೆಸರು, ಅಲಸಂದೆ, ಉದ್ದು, ಎಳ್ಳು, ತೊಗರಿ ಈಗ ದನಕರುಗಳ ಪಾಲಾಗಿವೆ.
 
ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನಲ್ಲಿ ಆರಿದ್ರಾ ಮಳೆ ಕೈ ಕೊಟ್ಟ ಪರಿಣಾಮ ಕಾಯಿಕಚ್ಚುವ ಹಂತದಲ್ಲಿದ್ದ ಮುಂಗಾರು ಬೆಳೆಗಳು ನಷ್ಟವಾಗಿದೆ. ಅಶ್ವಿನಿ ಭರಣಿ ಮಳೆ ಚೆನ್ನಾಗಿ ಸುರಿದಿದ್ರಿಂದ ಸಂತೋಷಗೊಂಡ ರೈತರು, ಹೆಸರು, ಅಲಸಂದೆ, ಉದ್ದು, ಎಳ್ಳು ಬಿತ್ತನೆ ಮಾಡಿದ್ದರು. ಕಾಲಕಾಲಕ್ಕೆ ಮಳೆಯಾಗಿದ್ರಿಂದ  ಹಚ್ಚಹಸಿರಾಗಿ ಬೆಳೆ ಬಂದಿತ್ತು. ಕಾಳುಗಟ್ಟುವ ಸಮಯದಲ್ಲಿ ಆರಿದ್ರಾ ಮಳೆ ಕೈಕೊಟ್ಟಿದ್ರಿಂದ ಬೆಳೆ ಸಂಪೂರ್ಣ ಹಾಳಾಗಿದೆ.

ರೈತರು
ದನ ಕರುಗಳನ್ನ ಕಟ್ಟಿ ಮೇಯಿಸುತ್ತಿದ್ದಾರೆ. ಕಳೆದ ವರ್ಷವೂ ಸಹ ಆರಿದ್ರಾ ಮಳೆ ಕೈಕೊಟ್ಟು ಸಾವಿರಾರು ಎಕರೆ ಮುಂಗಾರು ಬೆಳೆ ನಷ್ಟವಾಗಿತ್ತು. ವರ್ಷವೂ ಸಹ ಬೆಳೆ ಹಾಳಾಗಿದ್ರಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ಜಮೀನು ಹದ ಮಾಡಿ ಗೊಬ್ಬರ ಹಾಕಿ ಬೀಜ ಬಿತ್ತನೆ ಮಾಡಿದ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕಳೆದ ವರ್ಷದ ಬೆಳೆ ನಷ್ಟದಿಂದಾದ ಫಸಲ್ ಬೀಮಾ ಯೋಜನೆಯಡಿ ಪರಿಹಾರ ಇನ್ನೂ ಸಿಕ್ಕಿಲ್ಲ. ವರ್ಷವೂ ಬೆಳೆ ನಷ್ಟವಾಗಿದ್ದು ಭಾಗದ ರೈತರು ಮತ್ತಷ್ಟು ಕಂಗಾಲಾಗಿದ್ದಾರೆ.


ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ

ರಾಜ್ಯಾದ್ಯಂತ ಹೋರಾಟದ ಕಿಚ್ಚು ಹಚ್ಚಿಸಿರುವ ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷಗಳು ತುಂಬಿದವು. ...

ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಗೆ ಆಗಿದ್ದೇನು ಗೊತ್ತಾ?

ಪೊಲೀಸ್ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಪರಾರಿಯಾಗಲು ಯತ್ನಿಸಿದ ಆರೋಪಿ ...

ಧುಮ್ಮಿಕ್ಕಿ ಹರಿಯುತ್ತಿರುವ ಭದ್ರಾ ನದಿ: ಬದುಕು ಅತಂತ್ರ

ಭದ್ರಾನದಿ ಧುಮ್ಮಿಕ್ಕಿ ಹರಿಯುತ್ತಿರುವ ಜನರ ಬದುಕು ಅತಂತ್ರಕ್ಕೆ ಸಿಲುಕಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ...

ಇಂದಿರಾ ಕ್ಯಾಂಟೀನ್ ನಿಜವಾಗಿಯೂ ಯಶಸ್ವಿಯಾಗಿದೆಯಾ? ಸಚಿವ ಯುಟಿ ಖಾದರ್ ಹೇಳಿದ್ದೇನು?

ಮಂಗಳೂರು: ರಾಜ್ಯ ವಿಧಾನಸಭೆ ಕಲಾಪದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರಗಳ ಬಗ್ಗೆ ಬಿಜೆಪಿ ...