ಆರ್ಎಸ್ಎಸ್ ಮತ್ತು ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೂ ಆರ್ಎಸ್ಎಸ್ ಅನ್ನು ನಿಷೇಧ ಮಾಡುವ ಕೆಲಸ ನಡೆದಿತ್ತು. ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಸಂಘ ಪರಿವಾರವನ್ನು ನಿಷೇಧ ಮಾಡುವ ಶಕ್ತಿ ಯಾರಿಗೂ ಇಲ್ಲ. ಅವರಿಗೆ ತಾಕತ್ತಿದ್ದರೆ ಆರ್ಎಸ್ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.