ಬೆಂಗಳೂರು: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ರಾಜ್ಯ ರಾಜಧಾನಿಯಲ್ಲಿ ಬಂದ್ ವಾತಾವರಣವಿದೆ.ಇಂದು ಮತ್ತು ನಾಳೆ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಉಳಿದಂತೆ ನೈಟ್ ಮೇ 4 ರವರೆಗೆ ಕರ್ಫ್ಯೂ ಮುಂದುವರಿಯಲಿದೆ. ನಿನ್ನೆ ಮಧ್ಯಾಹ್ನದಿಂದಲೇ ಪೊಲೀಸರು ಅಂಗಡಿಗಳನ್ನು ಮುಚ್ಚಿಸುವ ಕೆಲಸ ಆರಂಭಿಸಿದ್ದಾರೆ.ಇಂದಿನಿಂದ ಕೇವಲ ಅಗತ್ಯ ವಸ್ತುಗಳ ಅಂಗಡಿಗಳು, ಔಷಧಾಲಯ, ಹಾಲು ಮಾತ್ರ ತೆರೆದಿದೆ. ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ನಿನ್ನೆಯಿಂದಲೇ ಮುಚ್ಚಿಸಲಾಗಿದೆ. ಅನಗತ್ಯವಾಗಿ ಖಾಸಗಿ