ಭೀಮಾ ತೀರದ ಹಂತಕನ ಕೊಲೆ ಪ್ರಕರಣ: ಆರೋಪಿ ಅಂದರ್

ವಿಜಯಪುರ, ಗುರುವಾರ, 5 ಜುಲೈ 2018 (17:47 IST)

ಭೀಮಾತೀರದ ಗ್ರಾಮಗಳಲ್ಲೇ ರಾಜ್ಯದಲ್ಲಿಯೇ ಹೆಚ್ಚು ಸುದ್ದಿ ಮಾಡಿದ ಭೀಮಾತೀರದ ಹಂತಕ ಗಂಗಾಧರ ಚಡಚಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯ ಹೆಡೆ ಮುರಿ ಕಟ್ಟಿ ಬಂಧಿಸುವಲ್ಲಿ ಸಿಐಡಿ ಹಾಗೂ ಪೊಲೀಸ್ ರು ಯಶಸ್ವಿಯಾಗಿದ್ದಾರೆ. 
 
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಹಾದೇವ ಸಾಹುಕಾರ ಭೈರಗೊಂಡನನ್ನು ಬಂಧಿಸಲಾಗಿದೆ. ಇಂಡಿ ತಾಲೂಕಿನ ಕೆರೂರು ಗ್ರಾಮದಲ್ಲಿನ ಮನೆಯಲ್ಲಿದ್ದ ಸಂದರ್ಭದಲ್ಲಿ ಅರೆಸ್ಟ್ ಮಾಡಲಾಗಿದೆ. 
 
ಸಿಐಡಿ ಹಾಗೂ ಚಡಚಣ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ವಿಜಯಪುರದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆತಂದಿದ್ದಾರೆ. 
 
ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಮಹಾದೇವ ಸಾಹುಕಾರ ಭೈರಗೊಂಡನನ್ನು ಪೊಲೀಸರು ಹಾಜರುಪಡಿಸಿದ್ದಾರೆ. 
 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಸತ್ ಚುನಾವಣೆಗೆ ಟಿಕೆಟ್ ಕೊಟ್ಟರೂ ಸ್ಪರ್ಧಿಸಲ್ಲ ಎಂದ ಅಂಬರೀಶ್

ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿದರೂ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ...

news

ಬಜೆಟ್ ನಲ್ಲಿ ಕರಾವಳಿಗೆ ಅನ್ಯಾಯ : ಉಡುಪಿ ಶಾಸಕ ರಘುಪತಿ ಭಟ್

ಮುಖ್ಯ ಮಂತ್ರಿ ಮಂಡಿಸಿದ ಬಜೆಟ್ ನಿರಾಶದಾಯಕವಾಗಿದ್ದು ಕಳೆದ 15 ವರ್ಷಗಳಲ್ಲಿ ಮಂಡನೆಯಾದ ಬಜೆಟ್‍ಗಳ ಪೈಕಿ ಈ ...

news

ಪುಟಾಣಿಯ ಕೃಷಿಪ್ರೇಮ: ಸಾರ್ವಜನಿಕರಿಂದ ಮೆಚ್ಚುಗೆ

ಚಿಕ್ಕಮಕ್ಕಳು ಮನೆಯ ಟಿವಿಯಲ್ಲಿ ಕಾರ್ಟೂನ್ ನೋಡುತ್ತಾ ಮೊಬೈಲ್‍ನಲ್ಲಿ ಗೇಮ್ ಆಡುತ್ತಾ ಕಾಲ ಕಳೆಯುವ ಇಂದಿನ ...

news

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಮುಂದುವರಿಕೆ

ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಾಗಿ ಉಡುಪಿ ನ್ಯಾಯವಾದಿ ...

Widgets Magazine