Widgets Magazine

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಮುಖಂಡ

ಹುಬ್ಬಳ್ಳಿ| pavithra| Last Modified ಭಾನುವಾರ, 17 ಮಾರ್ಚ್ 2019 (06:51 IST)

ಹುಬ್ಬಳ್ಳಿ : ಕೆಪಿಸಿಸಿ ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.


ನಾಲವಾಡ್ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿತ್ತು. ಆದರೆ ಕಾಂಗ್ರೆಸ್ ಬೆಳವಣಿಗಳಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೊತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಮಹೇಶ್ ನಾಲವಾಡ್ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ.


ಹುಬ್ಬಳ್ಳಿಯ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ಮಹೇಶ್ ನಾಲವಾಡ ಅವರು, 2018ರ ವಿಧಾನಸಭಾ ಚುನಾವಣೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಮಹೇಶ್ ನಾಲವಾಡ್ ಸೋತಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್
ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :