ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ!

ಮಂಡ್ಯ, ಶನಿವಾರ, 13 ಅಕ್ಟೋಬರ್ 2018 (15:02 IST)

ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ ಆಗುತ್ತಂತೆ. ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ.
 
ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ಮತ ಹಾಕಲ್ಲ. ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಿದ್ದರೆ ಮಂಡ್ಯದಲ್ಲಿ ಜೆಡಿಎಸ್ ಗೆಲ್ಲುವುದು ಕಷ್ಟ ಎಂದು ಕೆಪಿಸಿಸಿ ಒಬಿಸಿ ವಿಭಾಗ ಪ್ರಧಾನ ಕಾರ್ಯದರ್ಶಿ ಕೊತ್ತತ್ತಿ ಸಿದ್ದಪ್ಪ, ರಾಜ್ಯ ಕಾಂಗ್ರೆಸ್ ಮಾಹಿತಿ  ತಂತ್ರಜ್ಞಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್ಎಂ.ರಾಜಪ್ಪ, ರಾಜ್ಯ ಕಾಂಗ್ರೆಸ್ ಕಾನೂನು ಘಟಕ ಉಪಾಧ್ಯಕ್ಷ ಕೆಎನ್.ನಾಗರಾಜು ಅವರಿಂದ ವರಿಷ್ಠರ ಗಮನಕ್ಕೆ ತರಲಾಗಿದೆ.
 
ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಲಾಗಿದ್ದು, ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೆರೆಡು ಪ್ರತಿ ಗ್ರಾಮದಲ್ಲೂ ಪರಸ್ಪರ ವಿರೋಧಿಗಳಾಗಿದ್ದಾರೆ. ಇದುವರೆಗೂ ಎರಡು ಪಕ್ಷದವರು ವಿರೋಧಿಗಳಾಗಿ ಚುನಾವಣೆ ಎದುರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಕದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಒಲವು ತೋರಿಸಬಹುದು.

ಹೀಗಂತ ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಸೋಲುವ ಬಗ್ಗೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಎಚ್ಚರಿಕೆ ನೀಡುತ್ತಿರುವುದು ಹೊಸ ಬೆಳವಣಿಗೆಯಾಗಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಪಘಾತದ ಗಾಯಾಳು ರಕ್ಷಿಸಿ ಮಾನವೀಯತೆ ಮೆರೆದ ಶಾಸಕ

ಅಪಘಾತದಲ್ಲಿ ಗಾಯಾಳುವಾಗಿದ್ದವರನ್ನು ರಕ್ಷಿಸಿ ಮಾನವೀಯತೆ ಮೆರೆದ ಶಾಸಕರ ಜನಪರ ಕಾರ್ಯಕ್ಕೆ ಮೆಚ್ಚುಗೆ ...

news

ನಾನು ಜೆಡಿಎಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದ ಮಾಜಿ ಶಾಸಕಿ

ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ನ ಟಿಕೆಟ್ ನ ಆಕಾಂಕ್ಷಿಯಾಗಿದ್ದೇನೆ. ಹೀಗಂತ ಮಾಜಿ ಶಾಸಕಿ ...

news

ಜಾತ್ಯಾತೀತ ಪಕ್ಷಗಳ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದ ಸಚಿವ

ಜಾತ್ಯಾತೀತ ಪಕ್ಷಗಳ ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಸಚಿವ ಹೇಳಿದ್ದಾರೆ.

news

ನವರಾತ್ರಿಗಾಗಿ ನರ್ತಿಸಿದ ವಿದ್ಯಾರ್ಥಿನಿಯರು

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಸಡಗರ ಹಾಗೂ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಮಾಡಲಾಗುತ್ತಿದೆ.

Widgets Magazine