ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು, ಶನಿವಾರ, 16 ಸೆಪ್ಟಂಬರ್ 2017 (13:14 IST)

Widgets Magazine

ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ.
ನಗರದ ಮೌರ್ಯ ಸರ್ಕಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಆರ್‌. ಅಶೋಕ್, ಸಚಿವ ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
 
ಸುಪ್ರೀಂಕೋರ್ಟ್ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದೆ. ಪ್ರಕರಣದಲ್ಲಿ ಜಾರ್ಜ್ ಅವರನ್ನು ತನಿಖೆಗೊಳಪಡಿಸುವಂತೆ ಕೂಡಾ ಆದೇಶಿಸಿದೆ. ಆದಾಗ್ಯೂ ಸಚಿವ ಜಾರ್ಜ್ ರಾಜೀನಾಮೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಎಂ.ಕೆ.ಗಣಪತಿಯದ್ದು ಆತ್ಮಹತ್ಯೆಯಲ್ಲ, ಹತ್ಯೆ. ಇದರ ಹಿಂದಿರುವ ದುಷ್ಟಶಕ್ತಿಗಳ ಕೈವಾಡ ಬಹಿರಂಗವಾಗಬೇಕಿದೆ. ಸತ್ಯ ಬಹಿರಂಗವಾಗಬೇಕಾದಲ್ಲಿ ಸಚಿವ ಜಾರ್ಜ್ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
 
ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಪಾಲ್ಗೊಂಡಿದ್ದು ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕೆ.ಜೆ.ಜಾರ್ಜ್ ಬಿಜೆಪಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ Bjp Resign Cm Siddaramaiah K.j.george

Widgets Magazine

ಸುದ್ದಿಗಳು

news

ಮುಸ್ಲಿಮರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಓಲೈಕೆ: ಯಡಿಯೂರಪ್ಪ ಕಿಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ನಿಜವಾದ ಕಾಳಜಿಯಿಲ್ಲ. ಕೇವಲ ಓಟ್ ಬ್ಯಾಂಕ್‌ಗಾಗಿ ...

news

ಲಂಡನ್ನಿನ ಬಕೆಟ್ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್

ಲಂಡನ್ನಿನ ಅಂಡರ್ ಗ್ರೌಂಡ್ ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ಹೊಣೆಯನ್ನ ಇರಾಕ್`ನ ಐಸಿಸ್ ...

news

ಪರಮೇಶ್ವರ್ ಬಿಟ್ಟ ಅಸ್ತ್ರಕ್ಕೆ ತತ್ತರಿಸಿದ ಸಿಎಂ ಸಿದ್ದರಾಮಯ್ಯ...

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಸದಸ್ಯರ ನೇಮಕದಲ್ಲಿ ಆರಂಭವಾದ ಸಿಎಂ ಸಿದ್ದರಾಮಯ್ಯ ...

news

ನಡುರಸ್ತೆಯಲ್ಲಿ ಯೋಧನ ಮೇಲೆ ಹಲ್ಲೆ ನಡೆಸಿದ ಮಹಿಳೆ..!

ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ಸೇನಾ ಯೋಧನಿಗೆ ಪದೇ ಪದೇ ಕಪಾಳ ಮೋಕ್ಷ ಮಾಡಿದ್ದ ಮಹಿಳೆಯನ್ನ ದೆಹಲಿ ...

Widgets Magazine