ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ಮುಖಂಡ

ಬೆಂಗಳೂರು, ಸೋಮವಾರ, 24 ಜುಲೈ 2017 (19:14 IST)

ಮುಖ್ಯಮಂತ್ರಿ ತಮ್ಮ ಸ್ಥಾನದ ಘನತೆ ಗೌರವ ಮರೆತು ಮನೆಹಾಳ ಎಂದು ಜರಿದಿರುವುದು ಸರಿಯಲ್ಲ. ಅವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದೇನೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಹೇಳಿದ್ದಾರೆ. 
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಹಗರಣಗಳನ್ನು ಬಯಲು ಮಾಡುತ್ತಿರುವುದಕ್ಕೆ ಕೋಪಗೊಂಡು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ವಿರುದ್ಧ ನಗರದ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ. 
 
ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಘನತೆಯನ್ನು ಮರೆತು ಬಿಜೆಪಿ ಮುಖಂಡರಿಗೆ ಅಸಭ್ಯ ಪದಗಳನ್ನು ಬಳಕೆ ಮಾಡುತ್ತಿರುವುದು ನೋವಿನ ಸಂಗತಿ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಬೇಸರ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅವನ್ ಮನೆ ಹಾಳಾಗ, ಲೆಕ್ಕ ಬರೋಲ್ವಾ: ಸಿಎಂ ಕಿಡಿ

ಬೆಂಗಳೂರು: ಅವನ್ಯಾವನೋ ಒಬ್ಬ ಆರೋಪ ಮಾಡ್ತಿದ್ದಾನೆ. ಅವನ್ ಮನೆ ಹಾಳಾಗ ಅವನಿಗೆ ಲೆಕ್ಕ ಬರೋಲ್ವಾ ಎಂದು ಸಿಎಂ ...

news

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಶೀ-ಬಾಕ್ಸ್ ಗೆ ದೂರು ನೀಡಿ

ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರು ಕೆಲಸದ ಸ್ಥಳದಲ್ಲಿ ಯಾವುದೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಆನ್ ...

news

ನಮಗೆ ಯಾರ ರುಂಡವೂ ಬೇಕಾಗಿಲ್ಲ: ಎಚ್.ಡಿ.ರೇವಣ್ಣ ತಿರುಗೇಟು

ಹಾಸನ: ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ರೆ ರುಂಡವನ್ನು ಕತ್ತರಿಸಿಕೊಳ್ಳುವುದಾಗಿ ಹೇಳಿದ್ದ ಜಮೀರ್ ಅಹ್ಮದ್ ...

news

‘ಜಮೀರ್ ಅಹಮ್ಮದ್ ರುಂಡ ತಗೊಂಡು ನಾವೇನು ಮಾಡೋಣ?’

ಬೆಂಗಳೂರು: ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದರೆ ರುಂಡ ಕತ್ತರಿಸಿಕೊಳ್ಳುತ್ತೇನೆ ಎಂದು ಸವಾಲು ...

Widgets Magazine