Widgets Magazine
Widgets Magazine

ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ಬಿಜೆಪಿ ಸಂಸದ

ಬಳ್ಳಾರಿ, ಬುಧವಾರ, 12 ಏಪ್ರಿಲ್ 2017 (18:39 IST)

Widgets Magazine

ಮಹಾನಗರಪಾಲಿಕೆಯ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಸದ ಶ್ರಿರಾಮುಲು ಕಾಂಗ್ರೆಸ್ ಪಕ್ಷದ ಪರ ಮತ ಚಲಾಯಿಸಿ ಅಚ್ಚರಿ ಮೂಡಿಸಿದ್ದಾರೆ.
 
ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿ ಪಕ್ಷದ ಗುರಿ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಗುಡುಗುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ಸಂಸದರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಪಕ್ಷ ವಿರೋಧಿ ಕೃತ್ಯ ಮೆರೆದಿದ್ದಾರೆ. 
 
ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ. ವೆಂಕಟರಮಣ ಪರವಾಗಿ ಸಂಸದ ಶ್ರೀರಾಮುಲು ಹಾಗೂ ಇತರ ನಾಲ್ವರು ಬಿಜೆಪಿ ಸದಸ್ಯರು ಮತ ಹಾಕಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿಯೇ ಎರಡು ಗುಂಪುಗಳಾಗಿದ್ದರಿಂದ ಮೇಯರ್, ಉಪಮೇಯರ್ ಸ್ಥಾನ ಯಾರಿಗೆ ದಕ್ಕಲಿದೆ ಎನ್ನುವ ಬಗ್ಗೆ ತೀವ್ರ ಕುತೂಹಲ ಕೆರಳಿಸಿತ್ತು. 
 
ಕಾಂಗ್ರೆಸ್ ಮುಖಂಡರಾದ ಮಾಜಿ ಸಚಿವ ದಿವಾಕರ್ ಬಾಬು ಮತ್ತು ಸಚಿವ ಸಂತೋಷ್ ಲಾಡ್ ಗುಂಪಿನ ನಡುವೆ ಮೇಯರ್ ಸ್ಥಾನ ಕುರಿತಂತೆ ಹಣಾಹಣಿ ಏರ್ಪಟ್ಟಿತ್ತು. ಸಚಿವ ಲಾಡ್ ಗುಂಪಿನ ಅಭ್ಯರ್ಥಿಗಳಾಗಿ ಜಿ.ವೆಂಕಟರಮಣ ಮತ್ತು ಉಮಾದೇವಿ, ಕ್ರಮವಾಗಿ ಮೇಯರ್, ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದರು.
 
ಮಾಜಿ ಸಚಿವ ದಿವಾಕರಬಾಬು ಗುಂಪಿನಿಂದ ಗಾಜಲು ಶ್ರೀನಿವಾಸ್ ಹಾಗೂ ಲಕ್ಷ್ಮಿ, ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. 
 
ಬಳ್ಳಾರಿ ನಗರಪಾಲಿಕೆಯ ಹಿರಿಯ ಸದಸ್ಯರಾದ ಜಿ. ವೆಂಕಟರಮಣ 24 ಮತ ಪಡೆದು ಮೇಯರ್ ಸ್ಥಾನ ಅಲಂಕರಿಸಿದರೆ, ಉಮಾದೇವಿ 20 ಮತಗಳನ್ನು ಪಡೆದು ಉಪ ಮೇಯರ್ ಆಗಿ ಆಯ್ಕೆಯಾದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಾಳೆ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್‌, ಬಿಜೆಪಿಯಲ್ಲಿ ಜಯಮಾಲೆ ಯಾರಿಗೆ?

ಮೈಸೂರು: ಮುಂದಿನ ವರ್ಷದ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯ ...

news

10 ಲಕ್ಷ ರೈತರಿಗೆ ಬೆಳೆ ನಷ್ಟ ಪರಿಹಾರ: ಕಾಗೋಡು ತಿಮ್ಮಪ್ಪ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದಿಂದ ತತ್ತರಿಸಿರುವ 10 ಲಕ್ಷ ರೈತರಿಗೆ ಬೆಳೆ ನಷ್ಟ ...

news

ಬಳ್ಳಾರಿ ಮಹಾನಗರಪಾಲಿಕೆಗೆ ಜಿ. ವೆಂಕಟರಮಣ ಮೇಯರ್

ಬಳ್ಳಾರಿ: ಬಳ್ಳಾರಿ ಮಹಾನಗರಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ...

news

ಅರುಣಾಚಲ ಜನತೆ ಭಾರತದ ಅಕ್ರಮ ಅಡಳಿತದಿಂದ ಬೇಸತ್ತಿದ್ದಾರೆ: ಚೀನಾ ಡೈಲಿ

ಬೀಜಿಂಗ್: ಅರುಣಾಚಲ ಪ್ರದೇಶದ ತವಂಗ್ ಜಿಲ್ಲೆಗೆ ಟಿಬೆಟ್ ಧರ್ಮಗುರು ದಲೈ ಲಾಮಾ ಭೇಟಿ ನೀಡುವುದನ್ನು ಸದಾ ...

Widgets Magazine Widgets Magazine Widgets Magazine