ಬಿಜೆಪಿ ಬಿಕ್ಕಟ್ಟು: ಮುರಳೀಧರ್ ರಾವ್ ಇಂದು ಬೆಂಗಳೂರಿಗೆ

ಬೆಂಗಳೂರು, ಶನಿವಾರ, 29 ಏಪ್ರಿಲ್ 2017 (16:22 IST)

Widgets Magazine

ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲವೆಂಬುದು ಇತ್ತೀಚೆಗೆ ಅರಮನೆ ಮೈದಾನದಲ್ಲಿ ನಡೆದ ಅತೃಪ್ತರ ಸಭೆ ಬಳಿಕ ಜಗತ್ಹಾಹೀರಾಗಿದೆ. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು.


ಇದೀಗ, ರಾಜ್ಯದ ಬೆಳವಣಿಗೆ ಕಂಡೂ ಕಾಣದಂತೆ ಸುಮ್ಮನಿದ್ದ ಹೈಕಮಾಂಡ್ ಉಸ್ತುವಾರಿಯನ್ನ ರಾಜ್ಯಕ್ಕೆ ಕಳುಹಿಸುತ್ತಿದೆ. ಸಂಜೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರನ್ನ ಮುಖಾಮುಖಿ ಕೂರಿಸಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೆ, ಮುರಳೀಧರ್ ಭೇಟಿ ನಿಗದಿಯಾಗಿಲ್ಲ ಎಂದು ಈಶ್ವರಪ್ಪನವರು ಹೇಳಿರುವುದಾಗಿ ತಿಳಿದುಬಂದಿದೆ. ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿದ್ದು, ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮುರಳೀಧರ್ ರಾವ್ ಎರಡೂ ಬಣಗಳ ಅಭಿಪ್ರಾಯ ಪಡೆದು ಹೈಕಮಾಂಡ್`ಗೆ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಆಲೋಚನೆಯಲ್ಲಿರುವ ಬಿಜೆಪಿಗೆ ಪ್ರಮುಖ ನಾಯಕರ ನಡುವೆ ಬಿಕ್ಕಟ್ಟು ಏರ್ಪಟ್ಟಿರುವುದು ಹೈಕಮಾಂಡ್`ಗೆ ನುಂಗಲಾರದ ತುತ್ತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮುರಳೀಧರ್ ರಾವ್ ಬಿಜೆಪಿ ಯಡಿಯೂರಪ್ಪ Bjp Bengaluru Muralidhar Rao

Widgets Magazine

ಸುದ್ದಿಗಳು

news

ವಿಷ ಸೇವಿಸಿ ಸಚಿವರೆದುರೇ ಆತ್ಮಹತ್ಯೆಗೆ ಯತ್ನಿಸಿದ ರೈತ

ಸರ್ಕಾರ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಕೊಟ್ಟಿಲ್ಲವೆಂದು ಸಚಿವರೆದುರೇ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ...

news

ರೇಪ್ ಆರೋಪಿ ಸಂಸದನಿಗೆ ಬೇಲ್ ಕೊಟ್ಟ ನ್ಯಾಯಾಧೀಶರೇ ಸಸ್ಪೆಂಡ್!

ಲಕ್ನೋ: ಉತ್ತರ ಪ್ರದೇಶದ ಮಾಜಿ ಸಚಿವ ಬಿಎಸ್ ಪಿ ನಾಯಕ ಗಾಯತ್ರಿ ಪ್ರಜಾಪತಿಗೆ ಅತ್ಯಾಚಾರ ಪ್ರಕರಣದಲ್ಲಿ ...

news

ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನೊಬ್ಬ ಗ್ರಾಮಸ್ಥರಿಂದ ಒದೆ ತಿಂದ ...

news

ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ: ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ಸಾವು

ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ದಾರುಣವಾಗಿ ...

Widgets Magazine