ಕಪ್ಪ ಕಾಣಿಕೆ: ಬಿಜೆಪಿಯಿಂದ ಸಚಿವ ಎಂ.ಬಿ. ಪಾಟೀಲ್ ನಿವಾಸದ ಮುಂದೆ ಪ್ರತಿಭಟನೆ

ವಿಜಯಪುರ, ಶುಕ್ರವಾರ, 24 ಫೆಬ್ರವರಿ 2017 (18:17 IST)

ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲಾಗಿದೆ ಎನ್ನುವ ಡೈರಿಯಲ್ಲಿ ಸಚಿವ ಎಂ.ಬಿ.ಪಾಟೀಲ್ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
 
ಡೈರಿಯಲ್ಲಿ ಸಚಿವ ಪಾಟೀಲ್ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
 
ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ನಿರಂತರವಾಗಿ ಹೋರಾಟ ಮುಂದುವರಿಸುತ್ತಿವೆ ಎಂದು ಬಿಜೆಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.
 
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡೈರಿ ಬಹಿರಂಗದ ಹಿಂದೆ ಬಿಜೆಪಿ ಷಡ್ಯಂತ್ರ: ಜಿ.ಪರಮೇಶ್ವರ್ ಕಿಡಿ

ಬೆಂಗಳೂರು: ಡೈರಿ ಬಹಿರಂಗದ ಹಿಂದೆ ಬಿಜೆಪಿ ರಾಜಕಾರಣಿಗಳ ಷಡ್ಯಂತ್ರ ಅಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ...

news

ಡೈರಿ ವಿವಾದದ ಬಗ್ಗೆ ತುಟಿಬಿಚ್ಚದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಹೈಕಮಾಂಡ್`ಗೆ ಸಿದ್ದರಾಮಯ್ಯ ಸಾವಿರ ಕೋಟಿ ರೂಪಾಯಿ ಕಪ್ಪ ಕೊಟ್ಟಿದ್ದಾರೆ ಎಂಬ ಆರೋಪ ಕುರಿತಂತೆ ...

news

ಮುಂಬೈಪಾಲಿಕೆ: ಶಿವಸೇನೆ, ಬಿಜೆಪಿಗೆ ಮೈತ್ರಿ ಬಿಟ್ಟು ಬೇರೆ ಆಯ್ಕೆಯಿಲ್ಲ: ಗಡ್ಕರಿ

ಮುಂಬೈ: ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಫಲಿತಾಂಶದಿಂದಾಗಿ ಅತಂತ್ರ ಸ್ಥಿತಿ ...

news

ಸಿದ್ದು ಸಂಪುಟ ಸಂಪೂರ್ಣ ಬೆತ್ತಲಾಗಿದೆ: ಜಗದೀಶ ಶೆಟ್ಟರ್

ಶಾಸಕ ಗೋವಿಂದರಾಜು ಅವರ ಡೈರಿ ಬಹಿರಂಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ...

Widgets Magazine
Widgets Magazine