ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ

ಮಂಡ್ಯ, ಭಾನುವಾರ, 15 ಜುಲೈ 2018 (13:31 IST)

ಮಳೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಜಾಗೃತ ಕ್ರಮವಾಗಿ ಮಂಡ್ಯದ ಕೆ.ಆರ್.ಎಸ್. ಜಲಾಶಯದಿಂದ ಕಾವೇರಿ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.

 
ಕೊಡಗು ಸೇರಿದಂತೆ ಮಳೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಜಾಗೃತ ಕ್ರಮವಾಗಿ ಮಂಡ್ಯದ ಕೆ.ಆರ್.ಎಸ್. ಜಲಾಶಯದಿಂದ ಕಾವೇರಿ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
124.80 ಅಡಿ ಸಾಮರ್ಥ್ಯದ 123.65 ಅಡಿ ಭರ್ತಿಯಾಗಿದ್ದು, ಜಲಾಶಯಕ್ಕೆ 45 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರೋದ್ರಿಂದ ಮುಜಾಗೃತ ಕ್ರಮವಾಗಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ಸೂಚನೆ ನೀಡಿತ್ತು. ಜೊತೆಗೆ ಪ್ರಸಿದ್ಧ ಪ್ರವಾಸಿ ತಾಣವಾಗಿರೊ ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.  ಅಣೆಕಟ್ಟೆಯಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರೋದ್ರಿಂದ ಕಾವೇರಿ ನದಿ ಹುಕ್ಕಿ ಹರಿಯುತ್ತಿದೆ. ಅಣೆಕಟ್ಟೆ ಭರ್ತಿಯಾಗಿರುವುದು ಬರದಿಂದ ತತ್ತರಿಸಿದ್ದ ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ತರಿಸಿದೆ.
 
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂದಿನ ತಿಂಗಳು ಆರು ದಿನ ತಿರುಪತಿಗೆ ತಿಮ್ಮಪ್ಪನ ನೋಡುವಂತಿಲ್ಲ!

ಹೈದರಾಬಾದ್: ಇದೇ ಮೊದಲ ಬಾರಿಗೆ ಆರು ದಿನಗಳ ಕಾಲ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ ...

news

ವಿಜಯ್ ಮಲ್ಯರನ್ನು ಸ್ಮಾರ್ಟ್ ಅಂದಿದ್ದು ವಿವಾದವಾಗುತ್ತಿದ್ದ ಉಲ್ಟಾ ಹೊಡೆದ ಕೇಂದ್ರ ಸಚಿವ

ನವದೆಹಲಿ: ಬುಡಕಟ್ಟು ಜನಾಂಗದವರ ಕಾರ್ಯಕ್ರಮವೊಂದರಲ್ಲಿ ಸಾಲ ಮಾಡಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ...

news

ಸೇಕ್ರೆಡ್ ಗೇಮ್ಸ್ ನಲ್ಲಿ ರಾಜೀವ್ ಗಾಂಧಿಗೆ ಅವಹೇಳನ. ಈ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?

ನವದೆಹಲಿ : ನೆಟ್‌ಫ್ಲಿಕ್ಸ್‌ನ "ಸೇಕ್ರೆಡ್‌ ಗೇಮ್ಸ್‌'’ ವೆಬ್‌ ಸೀರೀಸ್‌ನಲ್ಲಿ ಮಾಜಿ ಪ್ರಧಾನಿ ರಾಜೀವ್‌ ...

news

ಸಾಲಮನ್ನಾ ಬಗ್ಗೆ ಇನ್ನೂ ಸರಿಯಾದ ಮಾಹಿತಿ ಇಲ್ಲದೇ ಕನ್ ಫ್ಯೂಸ್ ಆಗಿರುವ ರೈತರು

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಏನೋ ರೈತರ ಸಾಲಮನ್ನಾ ...

Widgets Magazine