Widgets Magazine

ಶಿಖಾರಿಪುರ ಬಿಟ್ಟು ಎಲ್ಲೂ ಹೋಗಲ್ಲ : ಬಿಎಸ್ ಯಡಿಯೂರಪ್ಪ

ಬಾಗಲಕೋಟೆ| Krishnaveni| Last Modified ಶುಕ್ರವಾರ, 6 ಅಕ್ಟೋಬರ್ 2017 (09:43 IST)
ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧೆ ಬಗ್ಗೆ ಇದ್ದ ಗೊಂದಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಪಷ್ಟನೆ ನೀಡಿದ್ದಾರೆ.

 
ಬಾಗಲಕೋಟೆಯ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ವರದಿಗಳನ್ನು ತಳ್ಳಿ ಹಾಕಿದ ಅವರು ತೇರದಾಳದಿಂದ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಸವದಿ ಸ್ಪರ್ಧಿಸುವುದು ಖಚಿತ ಎಂದಿದ್ದಾರೆ.
 
ತಾವು ಶಿಖಾರಿಪುರದ ಜನರ ಒತ್ತಾಯದ ಮೇರೆಗೆ ಅಲ್ಲಿಂದಲೇ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮನ ಒಲಿಸುವುದಾಗಿಯೂ ಅವರು ಬಾಗಲಕೋಟೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಮೇಲೆ ಟಾರ್ಗೆಟ್ ಮಾಡಿರುವ ಬಿಜೆಪಿ ಮುಂದಿನ ಎರಡು ದಿನಗಳಲ್ಲಿ ಬಿ.ಜೆ. ಪುಟ್ಟಸ್ವಾಮಿ ರಾಜ್ಯ ಸರ್ಕಾರದ ಹಗರಣಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :