Widgets Magazine

ಬಿಎಸ್‌ವೈ-ಅನಂತ್‌ ಸಿಡಿ: ಪೊಲೀಸರಿಂದ ಸೂಕ್ತ ಕ್ರಮ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು| Rajesh patil| Last Modified ಸೋಮವಾರ, 9 ಅಕ್ಟೋಬರ್ 2017 (15:49 IST)
ಹೈಕಮಾಂಡ್‌ಗೆ ಕಪ್ಪ ಕಾಣಿಕೆ ನೀಡುವ ಬಗ್ಗೆ ಸಿಡಿಯಲ್ಲಿ ದಾಖಲಾಗಿರುವ ಧ್ವನಿ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ ಕುಮಾರ್ ಅವರದ್ದಾಗಿದೆ ಎನ್ನುವುದು ಸಾಬೀತಾಗಿದೆ. ಪೊಲೀಸರು ಕಾನೂನಿನ ಪ್ರಕಾರ ಕ್ರಮಕೈಗೊಳ್ಳುತ್ತಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋರೆನ್ಸಿಕ್ ವರದಿಯಲ್ಲಿ ಸಿಡಿಯಲ್ಲಿರುವುದು ಬಿಎಸ್‌ವೈ-ಅನಂತ್‌ ಅವರದ್ದು ಎಂದು ಸಾಬೀತಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯರಾಗಲಿ ಅಥವಾ ನಾನಾಗಲಿ ಯಾವುದೇ ಪೊಲೀಸ್ ಅಧಿಕಾರಿಗೆ ನಿರ್ದೇಶನ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
 
ಪೊಲೀಸ್ ಅಧಿಕಾರಿಗಳು ಸಿಡಿ ಪ್ರಕರಣವನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಒಪ್ಪಿಸುತ್ತಾರೋ ಇಲ್ಲವೋ ಗೊತ್ತಿಲ್ಲ. ಕಾನೂನಿನ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರು ಯಾವುದೇ ಪ್ರಕರಣಕ್ಕೂ ರಾಜಕೀಯ ಥಳಕು ಹಾಕುತ್ತಾರೆ. ಪ್ರತಿಯೊಂದರಲ್ಲೂ ರಾಜಕೀಯ ಹುಡುಕುವುದೇ ಅವರ ಕಾಯಕವಾಗಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.    
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :