Widgets Magazine

ಬಿಎಸ್‌ವೈರಿಂದ ಸರಕಾರದ ಭ್ರಷ್ಟಾಚಾರದ ದಾಖಲೆಗಳು ಬಿಡುಗಡೆ: ಕರಂದ್ಲಾಜೆ

ಬೆಂಗಳೂರು| Rajesh patil| Last Modified ಬುಧವಾರ, 4 ಅಕ್ಟೋಬರ್ 2017 (13:33 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಶೀಘ್ರದಲ್ಲಿ ಸರಕಾರದ ಭ್ರಷ್ಟಾಚಾರ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 
ದಾಖಲಾತಿಗಳನ್ನು ಕೇಳಿದ್ರೆ ಸರಕಾರಿ ಅಧಿಕಾರಿಗಳು ದಾಖಲೆಗಳು ಕೊಡುತ್ತಿಲ್ಲ. ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿ ಕೋರಿದರೂ ಸರಕಾರಿ ಅಧಿಕಾರಿಗಳು ಯಾವುದೇ ದಾಖಲೆಗಳನ್ನು ಕೊಡುತ್ತಿಲ್ಲ ಎಂದು ಆರೋಪಿಸಿದರು.
 
ಸೇರಿದಂತೆ ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎನ್ನುವ ಆರೋಪಗಳಉ ಕೇಳಿಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
 
ಸರಕಾರದ ಭ್ರಷ್ಟಾಚಾರ ವಿರುದ್ಧದ ಯಾವುದೇ ಚರ್ಚೆಗೆ ನಾವು ಸಿದ್ದರಿದ್ದೇವೆ. ತಾಕತ್ತಿದ್ರೆ ಕಾಂಗ್ರೆಸ್‌ನವರು ಬಹಿರಂಗ ಚರ್ಚೆಗೆ ಬರಲಿ ಎಂದು ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :