ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಆಯವ್ಯಯವನ್ನು ಪ್ರಪ್ರಥಮ ಬಾರಿಗೆ ಇಲಾಖಾವಾರು ಬದಲಾಗಿ ಆರು ವಲಯಗಳನ್ನಾಗಿ ಹಂಚಿಕೆ ಮಾಡಲಾಗಿದೆ. ಬಜೆಟ್ ಅನುದಾನವನ್ನು ವಿನೂತನವಾಗಿ ವಿಂಗಡಿಸಿ ಹಂಚಿಕೆ ಮಾಡಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಮಂಡಿಸಿರುವ ರಾಜ್ಯದ 2020-2021ರ ಆಯವ್ಯಯದ ಮುಖ್ಯಾಂಶವಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯತ್ತ ಹೆಜ್ಜೆಯನ್ನಿರಿಸಿರುವುದನ್ನು ಇದು ಸೂಚಿಸುತ್ತದೆ ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ತಿಳಿಸಿದ್ದಾರೆ.ಆರು ವಲಯಗಳಾದ ಕೃಷಿ ಮತ್ತು