Widgets Magazine
Widgets Magazine

ಜೆಡಿಎಸ್ ಪಕ್ಷ ಸೇರುವತ್ತ ಸಿ.ಎಂ.ಇಬ್ರಾಹಿಂ ಚಿತ್ತ?

ಬೆಂಗಳೂರು, ಶನಿವಾರ, 6 ಮೇ 2017 (18:11 IST)

Widgets Magazine

ಪ್ರಕೃತಿ ಚಿಕಿತ್ಸಾಲಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
 
ಇಂದು ಬೆಳಿಗ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ಇಬ್ರಾಹಿಂ, ಒಂದು ವೇಳೆ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
 
ಮೊದಲು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಬನ್ನಿ. ಪಕ್ಷವನ್ನು ಅಧಿಕಾರಕ್ಕೆ ತರೋಣ. ನಂತರ ಸೂಕ್ತ ಸ್ಥಾನಮಾನದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ದೇವೇಗೌಡರು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರೊಂದಿಗೆ ಚರ್ಚಿಸುತ್ತೇನೆ. ನಂತರ ಮತ್ತೊಂದು ಬಾರಿ ದೇವೇಗೌಡರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷ ತೊರೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪಗೆ ಕೆ.ಬಿ ಶಾಣಪ್ಪ ತರಾಟೆ

ಮೈಸೂರು: ದಲಿತ ನಾಯಕ, ಅಸ್ಪಶ್ಯ್ರತೆ ವಿರುದ್ಧ ಹೋರಾಡಿದ ನಾಯಕ ಎಂದು ಯಾಕೆ ಹೇಳುತ್ತೀರಾ? ಬಿಜೆಪಿ ಮುಖಂಡ, ...

news

ಗೃಹ ಸಚಿವ ಸ್ಥಾನಕ್ಕೆ ಜಿ.ಪರಮೇಶ್ವರ್ ರಾಜೀನಾಮೆ ನೀಡಲಿ: ಮುನಿಯಪ್ಪ

ಬೆಂಗಳೂರು: ಗೃಹ ಸಚಿವ ಸ್ಥಾನಕ್ಕೆ ಜಿ.ಪರಮೇಶ್ವರ್ ರಾಜೀನಾಮೆ ನೀಡಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ...

news

ಅನಂತ್ ಕುಮಾರ್ ಯಾವಾಗ ನಿಜ ಹೇಳಿದ್ದಾರೆ?: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರಕಾರದಿಂದ ಬದ ಬರಗಾಲದ ಹಣವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎನ್ನುವ ...

news

ಕೆ.ಎಸ್.ಈಶ್ವರಪ್ಪರತ್ತ ಸುಳಿಯದ ಪ್ರಮುಖ ಮುಖಂಡರು

ಮೈಸೂರು: ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ...

Widgets Magazine Widgets Magazine Widgets Magazine