ಸಿಬಿಐನಿಂದ ಜಾರ್ಜ್ ವಿರುದ್ಧ ಎಫ್‌ಐಆರ್: ಮೂವರು ಸಚಿವರೊಂದಿಗೆ ಸಿಎಂ ಚರ್ಚೆ

ಬೆಂಗಳೂರು, ಗುರುವಾರ, 26 ಅಕ್ಟೋಬರ್ 2017 (20:52 IST)

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ, ಮೂವರು ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಸೌಧದಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಸಿ.ಮಹಾದೇವಪ್ಪ ಮತ್ತು ಕೆ.ಜೆ.ಜಾರ್ಜ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
 
ಸಿಬಿಐ ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರಿಂದ ವಿಪಕ್ಷಗಳು ಜಾರ್ಜ್ ರಾಜೀನಾಮೆಗೆ ಒತ್ತಾಯ ಹೇರುವುದು ಖಚಿತ. ಇಲ್ಲವೇ ಪ್ರತಿಭಟನೆಗೆ ಮುಂದಾದಲ್ಲಿ ಅದನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎನ್ನುವ ಬಗ್ಗೆ  ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
 
ವಿಪಕ್ಷಗಳಿಗೆ ಟಾಂಗ್ ನೀಡಲು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ಕೂಡಾ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದಾವೂದ್ ಭಾರತಕ್ಕೆ ಮರಳುವುದು ಮರೆತುಬಿಡಿ: ಮಾಜಿ ಪೊಲೀಸ್ ಆಯುಕ್ತ

ಮುಂಬೈ: ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ವಶದಲ್ಲಿರುವುದರಿಂದ ಭಾರತಕ್ಕೆ ...

news

ಬ್ರಾಹ್ಮಣ ಪ್ರಾಧಿಕಾರ ರಚನೆಗೆ ಸಿಎಂ ಸಿದ್ದರಾಮಯ್ಯ ಚಿಂತನೆ

ಬೆಂಗಳೂರು: ಬ್ರಾಹ್ಮಣ ಪ್ರಾಧಿಕಾರ ರಚನೆಗೆ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸರಕಾರಿ ...

news

`ಮುನ್ನಾ ಭಾಯ್’ ಸಂಜಯ್ ದತ್ ಗೆ ಮತ್ತೆ ಸಂಕಷ್ಟ

ಉತ್ತರ ಪ್ರದೇಶ: ಬಾಲಿವುಡ್ ನಟ ಸಂಜಯ್ ದತ್ ಗೆ ಹೊಸ ಸಂಕಷ್ಟ ಎದುರಾಗಿದೆ. 2009ರ ಲೋಕಸಭಾ ಚುನಾವಣೆಯ ...

news

ಪಾಕ್ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಅರೆಸ್ಟ್ ವಾರಂಟ್

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಪದೇ ಪದೇ ಗೈರುಹಾಜರಾಗುತ್ತಿರುವ ಹಿನ್ನೆಲೆಯಲ್ಲಿ, ...

Widgets Magazine
Widgets Magazine