ಜಾತಿ– ಜಾತಿಗಳ ನಡುವೆ ಬೆಂಕಿಯಿಡುವ ಮುಖ್ಯಮಂತ್ರಿ– ಆರ್.ಅಶೋಕ್

ಮೈಸೂರು, ಭಾನುವಾರ, 31 ಡಿಸೆಂಬರ್ 2017 (14:45 IST)


ವೀರಶೈವ– ಲಿಂಗಾಯತರ ಬಿರುಕು ಮೂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಬೆಂಕಿ ಇಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತರ ಸಮುದಾಯವನ್ನು ಒಡೆದಿರುವ ಮುಖ್ಯಮಂತ್ರಿ ಮತ್ತೆ ಅಧಿಕಾರಕ್ಕೆ ಬಂದರೆ ಬೇರೆ ಸಮುದಾಯಗಳನ್ನು ಒಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಜಾತಿಗಳ ನಡುವೆ ಬೆಂಕಿ ಇಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಕಾರಣಕ್ಕೂ ಮತ್ತೆ ಅಧಿಕಾರ ನೀಡಬಾರದು ಎಂದಿದ್ದಾರೆ.
 
ಬೇರೆ ಪಕ್ಷದಿಂದ ಬಂದಿರುವ ಸಿದ್ದರಾಮಯ್ಯ ತನ್ನ ಸಾಮ್ರಾಜ್ಯ ನಿರ್ಮಿಸಿಕೊಳ್ಳಲು ಮೂಲ ಕಾಂಗ್ರೆಸ್‌ನವರನ್ನು ತುಳಿದಿದ್ದಾರೆ. ಮುಂದಿನ ತಿಂಗಳಲ್ಲಿ ಕಾಂಗ್ರೆಸ್‌ನಿಂದ ಹಲವು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವಿವರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುಳ್ಳು ಹೇಳಿ ಮೋಸ ಮಾಡುತ್ತಿರುವ ಸಿದ್ದರಾಮಯ್ಯ– ಶ್ರೀರಾಮುಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಬಿಜೆಪಿ ...

news

ಸಿದ್ದರಾಮಯ್ಯ, ಪರಮೇಶ್ವರ ಗುದ್ದಾಟದಿಂದ ಕಾಂಗ್ರೆಸ್‌ನಲ್ಲಿ ಎರಡು ಗುಂಪು– ಈಶ್ವರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ನಡುವಿನ ಗುದ್ದಾಟದಿಂದ ...

news

ನಿತೀನ್ ಪಟೇಲ್‌ಗೆ ಬೆಂಬಲ ಘೋಷಿಸಿ ಭಿನ್ನಮತದ ಲಾಭ ಪಡೆಯಲು ಯತ್ನಿಸಿದ ಕಾಂಗ್ರೆಸ್

ಗುಜರಾತ್‌ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತದ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸಿದ್ದು, ...

news

ಪಿಯು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಕಾಲೇಜಿನ ...

Widgets Magazine
Widgets Magazine