ಮುಖ್ಯಮಂತ್ರಿಯ ಕ್ರಮ ರಾಜ್ಯದ ಹಿತಾಸಕ್ತಿಗೆ ಒಳ್ಳೆಯದಲ್ಲ– ಡಿವಿಎಸ್

ಬೆಂಗಳೂರು, ಶುಕ್ರವಾರ, 26 ಜನವರಿ 2018 (17:59 IST)

ಶೇಕಡಾ 20 ರಷ್ಟು ಮತಗಳಿಗಾಗಿ ಮುಖ್ಯಮಂತ್ರಿ ಅವರು ಅಲ್ಪಸಂಖ್ಯಾತರ ಮೇಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವುದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕ್ರಮ ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿನಾಶಕಾಲೆ ವಿಪರೀತಿ ಬುದ್ದಿ ಎಂಬಂತೆ ಅಲ್ಪ ಸಂಖ್ಯಾತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಐಜಿಪಿ ಅವರಿಗೆ ಪತ್ರ ಬರೆದಿರುವುದು ಖಂಡನೀಯವಾಗಿದೆ. ಬಹು ಸಂಖ್ಯಾತರನ್ನು ಒಡೆದಾಳುವ ನೀತಿ ಅನುಸರಿಸುತ್ತಿದ್ದು, ಜಾತಿ ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ ಎಂದಿದ್ದಾರೆ.
 
ಅಮಿತ್ ಶಾ ಲೆಕ್ಕ ಕೇಳಿದ ಬಗ್ಗೆ ಪ್ರತಿಕ್ರಿಸಿದ ಅವರು, ಲೆಕ್ಕ ಕೇಳುವುದು ನಮ್ಮ ಹಕ್ಕು, ಅನುದಾನ ಬಳಕೆಯಾಗಿರುವ ಬಗ್ಗೆ ಶ್ವೇತ್ರಪತ್ರ ಹೊರಡಿಸಬೇಕು. ರಾಜ್ಯದ ಮಾನ ಮರ್ಯಾದೆ ಹರಾಜು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ಧಗಂಗಾ ಶ್ರೀ ಭಕ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧಗಂಗಾ ಮಠದ ...

news

ಧ್ವಜಾರೋಹಣ ನೆರವೇರಿಸಲು ಡಿಕೆಶಿ ಪರದಾಟ

ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಲು ಇಂಧನ ಸಚಿವ ಡಿ.ಕೆ.ಶಿವಕುಮಾರ ಪರದಾಡಿದ ಪ್ರಸಂಗ ರಾಮನಗರ ಜಿಲ್ಲಾ ...

news

ಸಿಂಹ ಯಾರಾಗಬೇಕು ಎಂಬುದು ಜನ ತೀರ್ಮಾನಿಸುತ್ತಾರೆ– ಪರಮೇಶ್ವರ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಂಹ ಯಾರಾಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ...

news

ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಏನು ಗೊತ್ತಾ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ...

Widgets Magazine
Widgets Magazine