ಸಿಎಂ ದಾವೂದ್ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆ: ಸಂಸದ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ, ಮಂಗಳವಾರ, 5 ಸೆಪ್ಟಂಬರ್ 2017 (13:46 IST)

Widgets Magazine

ಹುಬ್ಬಳ್ಳಿ: ಬಿಜೆಪಿ ಯುವ ಮೋರ್ಚಾ ಕರೆ ನೀಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಪೊಲೀಸ್ ಇಲಾಖೆಯಿಂದ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ನೆಹರು ಮೈದಾನಕ್ಕೆ ಆಗಮಿಸಿದ್ದು, ಈ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್ ನೇತೃತ್ವದಲ್ಲಿ 3 ಎಸ್ಪಿ, 5 ಎಸಿಪಿ , 24 ಇನ್ಸ್ ಪೆಕ್ಟರ್, 28 ಪಿಎಸ್‌ಐ, 52 ಎಎಸ್‌ಐ, 100 ಹೋಂ ಗಾಡ್೯, 10 ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಬೈಕ್ ರ್ಯಾಲಿಗೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಚಾಲನೆ ನೀಡಬೇಕಿತ್ತು. ಇದರ ಜೊತೆಗೆ ಹೊರ ಜಿಲ್ಲೆಗಳಿಂದ ಜಾಥಾ ನಗರ ಪ್ರವೇಶಿಸದಂತೆ, ಬ್ಯಾರಿಕೇಡ್ ಹಾಕಲಾಗಿದೆ. ಶಾಂತಿ ಸುವ್ಯವಸ್ಥೆ ಹಾಗೂ ಟ್ರಾಫಿಕ್ ಜಾಮ್ ಕಾರಣ ಹೇಳಿ ನಿರ್ಬಂಧ ವಿಧಿಸಲಾಗಿದೆ.

ಇದೇವೇಳೆ ಮಾತನಾಡಿದ ಸಂಸದ ಪ್ರಹ್ಲಾದ್ ಜೋಷಿ, ಬಿಜೆಪಿ ಯುವ ಮೋರ್ಚಾ ಕರೆ ನೀಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಸರ್ಕಾರ ಅಡ್ಡಿಪಡಿಸುತ್ತಿರುವುದು ಖಂಡನೀಯ. ಸಿಎಂ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆ ಖಂಡನೀಯ. ಬೈಕ್ ಮೇಲೆ ಬರೋದೆ ಅಪರಾಧ ಎನ್ನುವ ರೀತಿ ಪೊಲೀಸರು ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ಮುಸ್ಲಿಮರ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರ ಓಲೈಕೆಗೆ ಹೊರಟ ಕಾಂಗ್ರೆಸ್ ದೇಶದಲ್ಲಿ ಹೀನಾಯದ ಸ್ಥಿತಿಗೆ ತಲುಪಿದೆ. ಹೀಗೆ ಮುಂದುವರೆದರೆ ರಾಜ್ಯದಲ್ಲಿಯೂ ಕಾಂಗ್ರೆಸ್ ಹೀನಾಯ ಸ್ಥಿತಿ ತಲುಪಲಿದೆ ಎಂದರು.

ಪೊಲೀಸ್ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಕಾನೂನು ವಿರುದ್ಧವಾಗಿ ನಡೆದುಕೊಂಡರೆ ಕ್ರಮಕೈಗೊಳ್ಳಿ. ನಾವು ಏನು ಶಾಂತಿ ಕದಡುವ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನನಗೆ ಬಿಎಸ್‌ವೈರಂತೆ ಕೆಟ್ಟ ಪದ, ಏಕವಚನ ಬಳಸಲು ಬರಲ್ಲ: ಸಿಎಂ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಂತೆ ನನಗೆ ಏಕವಚನ ಪ್ರಯೋಗಿಸುವುದಾಗಲಿ ಅಥವಾ ...

news

6 ತಿಂಗಳಷ್ಟೇ ನಿಮ್ಮ ಸರ್ಕಾರ, ನಮ್ಮ ಸರ್ಕಾರ ಬಂದಾಗ ನೋಡಿಕೊಳ್ತೇವೆ: ಪೊಲೀಸರಿಗೆ ಬಿಜೆಪಿ ಶಾಸಕನ ಅವಾಜ್

ಬಿಜೆಪಿ ನಡೆಸಲು ಉದ್ದೇಶದಿಂದ ಬೈಕ್ ರ್ಯಾಲಿಗೆ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ತಡೆ ...

news

ಪೊಲೀಸರ ಮೇಲೆ ಸಂಸದ ಪ್ರತಾಪ ಸಿಂಹನ "ಪ್ರತಾಪ"

ಬೆಂಗಳೂರು: ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ, ...

news

ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಅನುಮತಿ ನಿಡದಿದ್ದರೂ ಬೈಕ್ ರ್ಯಾಲಿ ನಡೆಸಲು ಉದ್ಧೇಶಿಸಿದ್ದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ...

Widgets Magazine Widgets Magazine