ಪರಮೇಶ್ವರ್ ಬಿಟ್ಟ ಅಸ್ತ್ರಕ್ಕೆ ತತ್ತರಿಸಿದ ಸಿಎಂ ಸಿದ್ದರಾಮಯ್ಯ...

ಬೆಂಗಳೂರು, ಶನಿವಾರ, 16 ಸೆಪ್ಟಂಬರ್ 2017 (11:32 IST)

Widgets Magazine

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಸದಸ್ಯರ ನೇಮಕದಲ್ಲಿ ಆರಂಭವಾದ ಸಿಎಂ ಮತ್ತು ಡಾ.ಜಿ.ಪರಮೇಶ್ವರ್ ನಡುವಿನ ಜಗಳ ಈಗ ಹೈಕಮಾಂಡ್ ಕದ ತಟ್ಟಿದೆ.


ಲಿಂಗಾಯತ ಕೋಟಾದಡಿ ಸಚಿವ ಸ್ಥಾನ ಅಲಂಕರಿಸಬೇಕಿದ್ದ ತಿಪಟೂರು ಶಾಸಕ ಷಡಕ್ಷರಿ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪ ಕೇಳಿ ಬಂದಿತ್ತು. ಈ ಕಾರಣದಿಂದಲೇ ಏನೋ ಸಂಪುಟ ವಿಸ್ತರಣೆ ವೇಳೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಷಡಕ್ಷರಿ ಬದಲು ಗೀತಾರವರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಹೀಗಾಗಿ ಶಾಸಕರ ವಿರುದ್ಧ ಸಿಎಂ ಅಂಡ್ ಟೀಂ ತಪ್ಪು ಮಾಹಿತಿ ರವಾನಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಇಮೇಲ್ ಮಾಡಿದ್ದಾರೆ.

ಸಿಎಂ ಭಾಗವಹಿಸುವ ಕಾರ್ಯಕ್ರಮಗಳಿಗೆ ಗೈರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದ ಪರಮೇಶ್ವರ್, ಸಿಎಂ ಜತೆ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥವಾಗುವವರೆಗೆ ಅಂತರ ಕಾಯ್ದುಕೊಳ್ಳುವ ಬಗ್ಗೆ ಸುದೀರ್ಘ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ.

ಸದ್ಯ ಪರಮೇಶ್ವರ್ ಬಿಟ್ಟಿರುವ ಅಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ ತತ್ತರಿಸಿ ಹೋಗಿದ್ದಾರೆ. ಇಂದು ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಸಂಜೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭೇಟಿಯಾಗಿ ವಿವರಣೆ ನೀಡಲಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಡುರಸ್ತೆಯಲ್ಲಿ ಯೋಧನ ಮೇಲೆ ಹಲ್ಲೆ ನಡೆಸಿದ ಮಹಿಳೆ..!

ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ಸೇನಾ ಯೋಧನಿಗೆ ಪದೇ ಪದೇ ಕಪಾಳ ಮೋಕ್ಷ ಮಾಡಿದ್ದ ಮಹಿಳೆಯನ್ನ ದೆಹಲಿ ...

news

ಬಿಎಸ್`ವೈಗೆ ಮತ್ತೊಂದು ಸಂಕಷ್ಟ..? ವಿಧಾನಸೌಧದ ಬಳಿ ಕಾರಿನಲ್ಲಿ ಸಿಕ್ಕ ಹಣದ ಬಗ್ಗೆ ಎಸಿಬಿ ತನಿಖೆ

ವಿಧಾನಸೌಧದಲ್ಲಿ ಕಾರಿನಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣ ಇದೀಗ ಮರುಜೀವ ಪಡೆದುಕೊಂಡಿದೆ. ಸಿಬಿಐ ...

news

ಡೇರಾ ಬಾಬಾನ ಮತ್ತೆರಡು ಪ್ರಕರಣಗಳು ಇಂದು ವಿಚಾರಣೆಗೆ

ನವದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ ಸಂಘಟನೆ ಮುಖ್ಯಸ್ಥ ...

news

ಪೊಲೀಸ್ ವರಿಷ್ಠರೊಂದಿಗೆ ಸಿಎಂ ಸಿದ್ದರಾಮಯ್ಯ ರಾತ್ರಿ ಹೊತ್ತು ದಿಡೀರ್ ಸಭೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ತಮ್ಮ ನಿವಾಸದಲ್ಲಿ ರಾತ್ರಿ ...

Widgets Magazine