ರೈತರಿಗೆ, ಬಡವರಿಗೆ ವರವಾಗಲಿದೆಯೇ ಸಿಎಂ ಸಿದ್ದರಾಮಯ್ಯ ಬಜೆಟ್? ಇಲ್ಲಿದೆ ನೋಡಿ ಡಿಟೇಲ್ಸ್

ಬೆಂಗಳೂರು, ಸೋಮವಾರ, 13 ಮಾರ್ಚ್ 2017 (15:21 IST)

Widgets Magazine

ರೈತರಿಗೆ ಸಂತಸದ ಸುದ್ದಿಯೊಂದು ಬರಲಿದೆ. ಬಜೆಟ್ ಮಂಡನೆಯಲ್ಲಿ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದ 14 ಲಕ್ಷ 72 ಸಾವಿರ ರೈತರ ಸಾಲವನ್ನು ಮನ್ನಾ ಮಾಡುವ ಬಗ್ಗೆ ಸರಕಾರ ಚಿಂತನೆ ನಡೆಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 11 ಸಾವಿರ ಕೋಟಿ ರೂಪಾಯಿಗಳ ಹೊರೆಯಾಗಲಿದೆ.
 
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಾಗಲಿರುವುದರಿಂದ ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ, ಜನಪರ, ರೈತ ಪರವಾಗಿರೋ ಬಜೆಟ್ ಮಂಡಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ.   
 
ರೈತರ ಅರ್ಧದಷ್ಟು ಸಾಲ ಮನ್ನಾ ಮಾಡಲಿ. ಉಳಿದರ್ಧ ಸಾಲವನ್ನು ಕೇಂದ್ರ ಸರಕಾರದಿಂದ ಮನ್ನಾ ಮಾಡಿಸುವುದು ನಮ್ಮ ಹೊಣೆ ಎಂದು ಬಿಜೆಪಿ ಸರಕಾರಕ್ಕೆ ಸವಾಲ್ ಹಾಕಿತ್ತು.
 
ಇದೀಗ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡಿ, ಬಿಜೆಪಿಗೆ ಇನ್ನರ್ಧ ಸಾಲವನ್ನು ಮನ್ನಾ ಮಾಡಿಸಿ ನಿಮ್ಮ ಮಾತನ್ನು ಉಳಿಸಿಕೊಳ್ಳಿ ಎನ್ನುವ ಸವಾಲ್ ಹಾಕುವ ರಣತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಇಲ್ಲವಾದಲ್ಲಿ ಇದೊಂದು ರೈತ ವಿರೋಧಿ ಪಕ್ಷ ಎನ್ನುವ ಪಟ್ಟ ಕಟ್ಟಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಮಾರ್ಚ್ 15 ರಂದು ಬಜೆಟ್ ಮಂಡಿಸಲಿದ್ದು, ಬಜೆಟ್ ಸಾಮಾನ್ಯ ಜನತೆಯ, ರೈತ ಪರ ಬಜೆಟ್ ಆಗಿರಲಿದೆಯೇ ಎನ್ನುವುದನ್ನು ಕಾದುನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಚಿವ ತನ್ವೀರ್ ಸೇಠ್ ಸ್ಪಷ್ಟನೆ

ಬೆಂಗಳೂರು: ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ. ಇಲ್ಲಸಲ್ಲದ ವದಂತಿಗಳಿಗೆ ಕಿಡಿಗೊಡಬೇಡಿ ಎಂದು ...

news

ನಮ್ಮ ಕುಮಾರಣ್ಣ ವೆಬ್ ಸೈಟ್ ಬಿಡುಗಡೆ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬಳಸಿದ ಡಿಯಾವನ್ನೇ ಜೆಡಿಎಸ್ ಸಹ ಕರ್ನಾಟಕದಲ್ಲಿ ಬಳಸಲು ಮುಂದಾದಂತೆ ...

news

ಪ್ರಧಾನಿ ಮೋದಿ ಹುಚ್ಚರಲ್ಲ, ಸಿಎಂ ಇಬ್ರಾಹಿಂ ಹುಚ್ಚ: ಜಗದೀಶ್ ಶೆಟ್ಟರ್

ಬೆಂಗಳೂರು: ಪ್ರಧಾನಿ ಮೋದಿಯನ್ನು ಹುಚ್ಚರೆಂದು ಕರೆದ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಸ್ವತಃ ...

news

ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆಯಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧಿಸುವುದಿಲ್ಲ. ಎಂದು ಜೆಡಿಎಸ್ ...

Widgets Magazine