ಸಿಎಂ ಸಿದ್ದರಾಮಯ್ಯಗೆ ಹಣ, ಅಧಿಕಾರದ ಮದ: ವಿಶ್ವನಾಥ್

ಬೆಂಗಳೂರು, ಬುಧವಾರ, 4 ಅಕ್ಟೋಬರ್ 2017 (15:49 IST)

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಣ, ಅಧಿಕಾರದ ಮದ ಹೆಚ್ಚಾಗಿದೆ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿಯೂ ಸಿಎಂ ನಾನೇ ಎನ್ನುತ್ತಿದ್ದಾರೆ. ಆದರೆ, ಜನತೆ ಅವರ ಅಹಂಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
 
ಕುರಬರಿಗೆ ಮತಹಾಕಬೇಡ ಎನ್ನಲು ಸಿಎಂ ಸಿದ್ದರಾಮಯ್ಯನವರಿಗೆ ಏನು ಹಕ್ಕಿದೆ. ಯಾರಿಗೆ ಮತಹಾಕಬೇಕು ಎನ್ನುವ ಬಗ್ಗೆ ಕುರುಬ ಜನಾಂಗ ಜ್ಞಾನ ಹೊಂದಿದೆ. ಇವರ ಹೇಳಿಕೆಗಳಿಗೆಲ್ಲಾ ಯಾರು ಮಣೆ ಹಾಕೋಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು. ಎರಡೂ ಪಕ್ಷಗಳು ರೈತ ವಿರೋಧಿ ಮತ್ತು ಜನವಿರೋಧಿಯಾಗಿವೆ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಎಚ್ ವಿಶ್ವನಾಥ್ ಕಾಂಗ್ರೆಸ್ ಜೆಡಿಎಸ್ Congress Jds Cm Siddaramaiah H.vishwanath

ಸುದ್ದಿಗಳು

news

ಪರಮೇಶ್ವರ್‌ಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

ಹುಣಸೂರು: ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ...

news

ಸಿಎಂ ಸಿದ್ದರಾಮಯ್ಯ ವಿರುದ್ಧ ದೇವೇಗೌಡ ವಾಗ್ದಾಳಿ

ತುಮಕೂರು: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿದೆ ಎನ್ನುವ ಸಿಎಂ ಸಿದ್ದರಾಮಯ್ಯ ...

news

ಬಿಎಸ್‌ವೈರಿಂದ ಸರಕಾರದ ಭ್ರಷ್ಟಾಚಾರದ ದಾಖಲೆಗಳು ಬಿಡುಗಡೆ: ಕರಂದ್ಲಾಜೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಶೀಘ್ರದಲ್ಲಿ ಸರಕಾರದ ಭ್ರಷ್ಟಾಚಾರ ವಿರುದ್ಧದ ...

news

ಶಶಿಕಲಾ ನಟರಾಜನ್ ಪರೋಲ್ ಆಸೆ ಇನ್ನೂ ಜೀವಂತ

ಬೆಂಗಳೂರು: ಅಕ್ರಮ ಆಸ್ಥಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ...

Widgets Magazine
Widgets Magazine