ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬನ್ನಿ: ಬಿಜೆಪಿ ನಾಯಕರಿಗೆ ಸಿಎಂ ಸವಾಲ್

ಬೆಂಗಳೂರು, ಬುಧವಾರ, 13 ಸೆಪ್ಟಂಬರ್ 2017 (12:36 IST)

ಬಿಜೆಪಿ ಮುಖಂಡರೊಂದಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ದವಿದೆ. ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ್ ರಾವ್‌ಗೆ ತಿರುಗೇಟು ನೀಡಿದ್ದಾರೆ. 
ಕಾಂಗ್ರೆಸ್ ಹಗರಣದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳ್ತಾರೆ. ಮೊದಲು ಸಂಬಂಧಿತ ದಾಖಲೆಗಳನ್ನು ಬಿಡುಗಡೆ ಮಾಡಿ. ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷವೂ ಸಿದ್ದವಿದೆ ಎಂದು  ಮರುಸವಾಲ್ ಹಾಕಿದ್ದಾರೆ.
 
ಮೊದಲು ಬಿಜೆಪಿ ನಾಯಕರು ತಮ್ಮ ಹಗರಣಗಳಿಂದ ತಪ್ಪಿಸಿಕೊಳ್ಳಲಿ. ಬಿಜೆಪಿ ನಾಯಕರು ಹಗರಣಗಳಲ್ಲಿಯೇ ಮುಳುಗಿಹೋಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಗರಣ ನಡೆಸಿದೆ ಎನ್ನುವುದರ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಸೇರಿದಂತೆ ಅನೇಕ ಬಿಜೆಪಿ ನಾಯಕರ ವಿರುದ್ಧ ದೂರುಗಳು ದಾಖಲಾಗಿವೆ. ಬಿಜೆಪಿ ಹಗರಣ ಮುಕ್ತವಾಗಿ ಹೊರಬರಲಿ. ನಂತರ ಕಾಂಗ್ರೆಸ್ ಪಕ್ಷದ ವಿರುದ್ಧ ಬಹಿರಂಗ ಚರ್ಚೆಗೆ ಬರಲಿ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಬಿಜೆಪಿ ಕಾಂಗ್ರೆಸ್ ಮುರಳೀಧರ್ ರಾವ್ ಯಡಿಯೂರಪ್ಪ Bjp Congress Muralidharrao Yeddyurappa Cm Siddaramaiah

ಸುದ್ದಿಗಳು

news

ಲಿಂಗಾಯತರ ಮಧ್ಯೆ ಬೆಂಕಿ ಹಚ್ಚಿದ್ದು ಸಿಎಂ ಸಿದ್ದರಾಮಯ್ಯ: ಈಶ್ವರಪ್ಪ

ಕಲಬುರ್ಗಿ: ವೀರಶೈವ ಲಿಂಗಾಯತ ಧರ್ಮದವರ ಮಧ್ಯೆ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ...

news

ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸು: ಬಿಎಸ್‌ವೈ

ಬಾಗಲಕೋಟೆ: ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸಿನಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ಸ್ಮೃತಿ ಇರಾನಿಗೆ ನಟಿ, ಮಾಜಿ ಸಂಸದೆ ರಮ್ಯಾ ತಿರುಗೇಟು

ಬೆಂಗಳೂರು: ರಾಹುಲ್ ಗಾಂಧಿ ಅಮೆರಿಕಾದಲ್ಲಿ ಮಾಡಿದ ಭಾಷಣವನ್ನು ಟೀಕಿಸಿದ ಕೇಂದ್ರ ಸಚಿವೆಸ್ಮೃತಿ ಇರಾನಿಗೆ ...

news

ಎಂ.ಬಿ.ಪಾಟೀಲರದ್ದು ವಿನಾಶಕಾಲೇ ವಿಪರೀತ ಬುದ್ಧಿ: ಯಡಿಯೂರಪ್ಪ

ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕೆಂದು ಹೇಳಿ ಪೇಚಿಗೆ ಸಿಲುಕಿರುವ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ...

Widgets Magazine