ಬರ ನಿರ್ವಹಣೆ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು, ಮಂಗಳವಾರ, 18 ಏಪ್ರಿಲ್ 2017 (14:20 IST)

Widgets Magazine

ಕುಡಿಯುವ ನೀರು, ಪಶುಮೇವಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ತೆಗೆದುಕೊಂಡು ನೀರು ಪೂರೈಸಿ. ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆಯುವಾಗ ಮಾಲೀಕರನ್ನು ಹೆದರಿಸಬೇಡಿ ಎಂದು ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
 
ಪರಿಸ್ಥಿತಿ ನಿರ್ವಹಣೆ ಕುರಿತಂತೆ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬರಗಾಲ ಪರಿಸ್ಥಿತಿ ನಿರ್ವಹಣೆಗೆ ಸರಕಾರ ಸಂಪೂರ್ಣ ಸಿದ್ದವಾಗಿದೆ. ಸರಕಾರ ಅಧಿಕಾರಿಗಳಿಗೆ ಎಲ್ಲಾ ರೀತಿಯ ನೆರವು ನೀಡುತ್ತದೆ ಆತಂಕ ಬೇಡ ಎಂದರು.  
 
ರಾಜ್ಯ ಸರಕಾರ ಬಿಡುಗಡೆಗೊಳಿಸಿದ ಸಬ್ಸಿಡಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆಯಾಗಬೇಕು. ಸಬ್ಸಿಡಿ ಹಣ ವಿತರಣೆಯಲ್ಲಿ ಅವ್ಯವಹಾರವಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 
 
ರಾಜ್ಯ ಸರಕಾರ ಪ್ರತಿಯೊಂದು ಜಿಲ್ಲೆಯಲ್ಲಿರುವ ಬರ ಪರಿಸ್ಥಿತಿಯ ಬಗ್ಗೆ ವರದಿ ತರಿಸಿಕೊಂಡಿದ್ದು, ಅಗತ್ಯವಾದ ಎಲ್ಲಾ ನೆರವು ನೀಡಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಬರಗಾಲ Drought Congress Cm Siddaramaiah

Widgets Magazine

ಸುದ್ದಿಗಳು

news

ಯಡಿಯೂರಪ್ಪರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ: ದೇವೇಗೌಡ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ ಎಂದು ...

news

ದಿಗ್ವಿಜಯ್ ಸಿಂಗ್ ಭೇಟಿಯಾದ ಜೆಡಿಎಸ್ ಬಂಡಾಯ ಶಾಸಕರು

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಆರೋಪದಲ್ಲಿ ಜೆಡಿಎಸ್ ಪಕ್ಷದಿಂದ ...

news

ಮಾಜಿ ಸಚಿವ ಎಚ್.ವೈ ಮೇಟಿಗೆ ಕ್ಲೀನ್ ಚಿಟ್ ಸಾಧ್ಯತೆ

ಬೆಂಗಳೂರು: ಮಾಜಿ ಸಚಿವ ಎಚ್‌.ವೈ ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ...

news

ಜೆಡಿಎಸ್ ಏಕಾಂಗಿ ಸ್ಪರ್ಧೆ, ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ: ದೇವೇಗೌಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ...

Widgets Magazine