Widgets Magazine

ನಾ ಬಂದ್ರೆ ಜನ ಹುಚ್ಚೆದ್ದು ಕುಣಿಯುತ್ತಾರೆ: ಬಿಎಸ್ ಯಡಿಯೂರಪ್ಪ

ಬೆಂಗಳೂರು| Krishnaveni| Last Modified ಗುರುವಾರ, 5 ಅಕ್ಟೋಬರ್ 2017 (11:34 IST)
ಬೆಂಗಳೂರು: ವಾಲ್ಮೀಕಿ ಜಯಂತಿ ದಿನವಾದ ಇಂದು ವಿಧಾನಸೌಧದ ಮುಂಭಾಗದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮಾಡಿದ್ದಾರೆ. ಆದರೆ ಇದರಲ್ಲೂ ಅಪಸ್ವರ ಕೇಳಿಬಂದಿದೆ.

 
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸದೇ ಇರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
‘ವಾಲ್ಮೀಕಿ ಜಯಂತಿ ದಿನಕ್ಕೆ ಸರ್ಕಾರಿ ರಜೆ ಘೋಷಿಸಿದ್ದೇ ನಾನು. ಇದೀಗ ಪುತ್ಥಳಿ ಅನಾವರಣೆ ಕಾರ್ಯಕ್ರಮಕ್ಕೆ ಸಿಎಂ ನನ್ನನ್ನು ಕಡೆಗಣಿಸಿದ್ದಾರೆ. ನಾನು ಬಂದರೆ ಜನ ಹುಚ್ಚೆದ್ದು ಕುಣಿಯುತ್ತಾರೆ ಎಂದು ಸಿಎಂಗೆ ಭಯ. ಅದಕ್ಕೆ ಸಿಎಂ ನನ್ನನ್ನು ಆಹ್ವಾನಿಸಿಲ್ಲ’ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :