ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಸಿದ್ಧ.. ನಮಗೆ ಎಷ್ಟು ಸೀಟು ಬಿಟ್ಟುಕೊಡ್ತಾರೆ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಿ ಹೇಳಲಿ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.