ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಕಾಂಗ್ರೆಸ್ ಸಂಪರ್ಕ: ಕರಂದ್ಲಾಜೆ ಆರೋಪ

ಬೆಂಗಳೂರು, ಗುರುವಾರ, 5 ಅಕ್ಟೋಬರ್ 2017 (16:43 IST)

ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಬಿಜೆಪಿ ನಾಯಕರಿಗೆ ಸಂಪರ್ಕವಿಲ್ಲ. ಅಂತಹ ಸಂಘಟನೆಗಳ ಸಹಕಾರ ಬಿಜೆಪಿಗೆ ಅಗತ್ಯವಿಲ್ಲ.ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಕಾಂಗ್ರೆಸ್ ಸಂಪರ್ಕವಿರಬಹುದು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಂಘಟನೆಗಳ ಸಹಕಾರ ಕಾಂಗ್ರೆಸ್ ಪಕ್ಷಕ್ಕೆ ಅಗತ್ಯವಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಸಚಿವ ಯು.ಟಿ.ಖಾದರ್ ಜನತೆಯನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಜನತೆ ಸಚಿವರ ಮಾತುಗಳಿಗೆ ಮರಳಾಗುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಹಣ ಮತ್ತು ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ಖಚಿತ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ: ಶೆಟ್ಟರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳನ್ನು ಹಣಿಯಲು ಭ್ರಷ್ಟಾಚಾರ ನಿಗ್ರಹ ದಳ ...

news

ಐಟಿ ಅಧಿಕಾರಿಗಳ ಮುಂದೆ ಹಾಜರಾದ ಸಚಿವ ಡಿಕೆಶಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಇಂದು ...

news

2018ರಲ್ಲಿ ವಿಧಾನಸಭೆ, ಲೋಕಸಭೆಗೆ ಒಂದೇ ಬಾರಿ ಚುನಾವಣೆ: ಚುನಾವಣೆ ಆಯೋಗ

ನವದೆಹಲಿ: ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಒಂದೇ ಬಾರಿಗೆ ...

news

ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಚಿತ್ರನಿರ್ಮಾಪಕ ಅರೆಸ್ಟ್

ನೋಯ್ಡಾ: ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ, ಅತ್ಯಾಚಾರವೆಸಗುತ್ತಿರುವ ದೃಶ್ಯಗಳ ಅಶ್ಲೀಲ ವಿಡಿಯೋ ಮಾಡಿ ...

Widgets Magazine