ಕೆಪಿಸಿಸಿಗೆ ನೂತನ ಸಾರಥಿ ಆಯ್ಕೆಗೆ ಹೈಕಮಾಂಡ್ ಕಸರತ್ತು

ಬೆಂಗಳೂರು, ಭಾನುವಾರ, 16 ಏಪ್ರಿಲ್ 2017 (14:19 IST)

Widgets Magazine

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ನೇಮಕಕ್ಕೆ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡಿದೆ.
 
ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವುದರಿಂದ ಪಕ್ಷಕ್ಕೆ ಹೊಸ ಶಕ್ತಿ ತಂದುಕೊಡುವ ನಾಯಕನನ್ನು ಆಯ್ಕೆ ಮಾಡಬೇಕು ಎನ್ನುವುದು ಹೈಕಮಾಂಡ್ ನಿಲುವಾಗಿದೆ.  
 
ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕು ಎನ್ನುವುದು ಪರಮೇಶ್ವರ್ ಬಯಕೆಯಾಗಿದೆ. ಒಂದು ವೇಳೆ, ಮುಂದಿನ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕು ಎನ್ನುವ ಅವರ ಮನದಾಳದ ಗುಟ್ಟು ಗುಟ್ಟಾಗಿ ಉಳಿದಿಲ್ಲ. 
 
ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರಾಗಲು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಆರ್.ಪಾಟೀಲ್ ಹೆಸರುಗಳು ಚಾಲ್ತಿಯಲ್ಲಿವೆ.   
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಶಿವಕುಮಾರ್ ಶಾಸಕರ ಮನಓಲೈಸುವ ಪ್ರಯತ್ನ ಮುಂದುವರಿಸಿದ್ದಾರೆ ಎನ್ನಲಾಗುತ್ತಿದೆ. 
 
ಹೈಕಮಾಂಡ್ ಬಹುತೇಕ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅಥವಾ ಎಂ.ಬಿ.ಪಾಟೀಲ್ ಆಯ್ಕೆಗೆ ಆಸಕ್ತಿ ತೋರುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ. ಹಿಂದುತ್ವದ ಧ್ರುವಿಕರಣ ಸಾಧ್ಯವಿಲ್ಲ ಎಂದು ಸಿಎಂ ...

news

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಭಾರಿ ಭದ್ರತೆಯನ್ನು ...

news

ಹೈಜಾಕ್ ಬೆದರಿಕೆ: ಏರ್ ಪೋರ್ಟ್ ಗಳಲ್ಲಿ ಹೈ ಅಲರ್ಟ್

ಮುಂಬೈ: ವಿಮಾನ ಅಪಹರಣ ಮಾಡವ ಮಾಹಿತಿಯೊಂದರ ಹಿನ್ನಲೆಯಲ್ಲಿ ಚೆನ್ನೈ, ಹೈದರಾಬಾದ್ ಮತ್ತು ಮುಂಬೈ ವಿಮಾನ ...

news

ಇಂದು ಸಿಎಂ ಸಿದ್ದರಾಮಯ್ಯ- ದಿಗ್ವಿಜಯ್ ಸಿಂಗ್ ಭೇಟಿ ಸಾಧ್ಯತೆ

ನವದೆಹಲಿ: ಉಪಚುನಾವಣೆಯ ಭರ್ಜರಿ ಗೆಲುವಿನೊಂದಿಗೆ ಪಕ್ಷದ ಹೈಕಮಾಂಡ್‌ ಮುಖಂಡರನ್ನು ಭೇಟಿ ಮಾಡಲು ಆಗಮಿಸಿರುವ ...

Widgets Magazine Widgets Magazine