ಡಿಕೆಶಿ ವಿರುದ್ಧ ವಾಗ್ದಾಳಿ: ಕಾಂಗ್ರೆಸ್‌ ಪಕ್ಷಕ್ಕೆ ಯೋಗೇಶ್ವರ್ ಗುಡ್‌ಬೈ

ಬೆಂಗಳೂರು, ಶನಿವಾರ, 14 ಅಕ್ಟೋಬರ್ 2017 (14:09 IST)

ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ರಾಮನಗರದಲ್ಲಿ ಕರೆದ ದಿಢೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬೆಳವಣಿಗೆಯನ್ನು ಸಹಿಸದ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ತಪ್ಪಲು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. 
 
ಕಾಂಗ್ರೆಸ್ ಸದಸ್ಯರ ನಡುವಳಿಕೆಗೆ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
 
ಅಕ್ಟೋಬರ್ 22 ರಂದು ಚನ್ನಪಟ್ಟಣದಲ್ಲಿ ಕಾರ್ಯಕರ್ತರ, ಬೆಂಬಲಿಗರ ಸಭೆ ನಡೆಸಿ, ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ  ಹೇಳಿದ್ದಾರೆ.
 
ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿ ಕಾಂಗ್ರೆಸ್ ಸೇರಿದ್ದ ಯೋಗೇಶ್ವರ್, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರೂ ಯಾರೊಬ್ಬ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂಪರ್ಕಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

`ಸುಪ್ರೀಂಕೋರ್ಟ್ ಅವಕಾಶ ನೀಡಿದರೂ ಸಭ್ಯಸ್ಥ ಮಹಿಳೆಯರು ದೇಗುಲ ಪ್ರವೇಶಿಸುವುದಿಲ್ಲ’

ಕೇರಳ: ಸುಪ್ರೀಂಕೋರ್ಟ್ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಿದರೂ, ...

news

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ಶಂಕಿತ ಆರೋಪಿಗಳ ...

news

ಪ್ರಧಾನಿ ವಿರುದ್ಧ ಅಸಭ್ಯ ಪದ ಬಳಕೆ: ಕ್ಷಮೆ ಕೋರಿದ ರೋಷನ್ ಬೇಗ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅಸಭ್ಯ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ...

news

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಕ್ಕೆ ಪ್ರಣಬ್ ಮುಖರ್ಜಿ ಮುನಿಸಿಕೊಂಡಿದ್ದರಂತೆ

ನವದೆಹಲಿ: ಯುಪಿಎ ಅಧಿಕಾರಾವಧಿಯಲ್ಲಿ ಮನಮೋಹನ್ ಸಿಂಗ್ ಎರಡು ಬಾರಿಗೆ ಪ್ರಧಾನಿಯಾಗಿ ಅಧಿಕಾರ ...

Widgets Magazine
Widgets Magazine