ಕಾಂಗ್ರೆಸ್ ಕಾರ್ಯಕರ್ತರ ಧರಣಿ: ಮೋದಿ, ಅಮಿತ್ ಶಾ ಪ್ರತಿಕೃತಿ ದಹನ

ಬೆಂಗಳೂರು, ಬುಧವಾರ, 2 ಆಗಸ್ಟ್ 2017 (13:29 IST)

ಇಂಧ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈವಾಡವಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
 
ನಗರದ ಗಾಂಧಿ ಪ್ರತಿಮೆ ಬಳಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಹಟಾವೋ ಭಾರತ್ ಬಚಾವೋ ಎನ್ನುವ ಘೋಷಣೆಗಳನ್ನು ಕೂಗಿದರು.
 
ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಕೇಂದ್ರ ಸರಕಾರಕ್ಕೆ ಧಿಕ್ಕಾರ ಎಂದು ಕೂಗಿದ ಪ್ರತಿಭಟನಾಕಾರರು, ಜನಾರ್ದನ ರೆಡ್ಡಿ 500 ಕೋಟಿ ವೆಚ್ಚ ಮಾಡಿ ಪುತ್ರಿಯ ವಿವಾಹ ಮಾಡಿದಾಗ ಯಾಕೆ ಐಟಿ ರೈಡ್ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.   
 
ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ನುಗ್ಗಲು ಯತ್ನಿಸಿದ ಬೆಂಬಲಿಗರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕುಮ್ಮಕ್ಕನಿಂದಲೇ ಐಟಿ ದಾಳಿ ನಡೆದಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಐಟಿ ದಾಳಿ ಬಗ್ಗೆ ಡಿ.ಕೆ. ಸುರೇಶ್ ಮೊದಲ ಪ್ರತಿಕ್ರಿಯೆ

ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ...

news

ಐಟಿ ದಾಳಿಯಂತಹ ಗೊಡ್ಡು ಬೆದರಿಕೆಗಳಿಗೆ ಮಣಿಯೋಲ್ಲ: ಸಿಎಂ ಗುಡುಗು

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲೆ ನಡೆಸಿರುವ ದಾಳಿಯಲ್ಲಿ ಕೇಂದ್ರದ ...

news

ಡಿಕೆಶಿ ನಿವಾಸದ ಮೇಲೆ ದಾಳಿಗೆ ಬಿಜೆಪಿ ಹೈಕಮಾಂಡ್ ಕುಮ್ಮಕ್ಕು

ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದೆ. ಪ್ರಧಾನಿ ಮೋದಿಯಿಂದ ...

news

ಐಟಿ ದಾಳಿ ವೇಳೆ ದಾಖಲೆ ಹರಿಯಲು ಯತ್ನ: ಅರುಣ್ ಜೇಟ್ಲಿ

ಈಗಲ್ ಟನ್ ರೆಸಾರ್ಟ್`ನಲ್ಲಿ ಐಟಿ ದಾಳಿ ವೇಳೆ ದಾಖಲೆಗಳನ್ನ ಹರಿಯಲು ಸಚಿವರು ಪ್ರಯತ್ನ ನಡೆಸಿದ್ದಾರೆ. ಬಳಿಕ ...

Widgets Magazine