ಮಧ್ಯಪ್ರದೇಶದಲ್ಲಿ ದಿನದಿಂದ ದಿನಕ್ಕೆ ಮತಾಂತರ ಪ್ರಕರಣಗಳ ಕುರಿತು ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮಿಷನರಿ ಶಾಲೆಗಳ ಮೇಲೆ ನಿಗಾ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.