ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಮತ್ತೆ ಸಂಕಷ್ಟ

ಮೈಸೂರು, ಬುಧವಾರ, 13 ಸೆಪ್ಟಂಬರ್ 2017 (13:58 IST)

ಮೈಸೂರು: ಮರಳು ಸಾಗಾಣಿಕೆಗೆ ಅಕ್ರಮ‌‌ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪುತ್ರ ಸುನೀಲ್ ಬೋಸ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. 


ಅಕ್ರಮ ಮರಳುಗಾರಿಕೆಗೆ ಪರವಾನಗಿ ನೀಡಲು ಲಂಚ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಪ್ರೇರೇಪಣೆ ನೀಡಿದ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಸುನೀಲ್ ಬೋಸ್ ಆರೋಪಿ ಎಂದು ಪರಿಗಣಿಸಿ ಮೈಸೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. 

ರಾಜು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಲ್ಫೋನ್ಸಿಸ್ ಗೆ ಮರಳು ಗುತ್ತಿಗೆದಾರನಿಂದ ಲಂಚ ಪಡೆಯುವಂತೆ ಸುನೀಲ್ ಬೋಸ್ ಒತ್ತಡ ಒತ್ತಡ ಹಾಕಿದ್ದರು. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡು ಸುನಿಲ್ ಬೋಸ್ ವಿರುದ್ಧ ಅಲ್ಫೋನ್ಸಿಸ್ ಲಿಖಿತ ದೂರು ದಾಖಲಿಸಿದ್ದರು. ಈ ಸಂಬಂ‍ಧ ಸುನೀಲ್ ಬೋಸ್ ಕೋರ್ಟ್ ಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಕೋರ್ಟ್ ಆದೇಶಿಸಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಿಗ್ನೇಶ್ ಮೇವಾನಿ ವಿರುದ್ಧ ದೂರು ದಾಖಲು

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವಹೇಳನಕಾರಿ ವಾಗ್ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ದಲಿತ ಮುಖಂಡ ...

news

ಸಿಎಂ ಸಿದ್ದರಾಮಯ್ಯ, ಸಚಿವರ ಹಗರಣಗಳು ವಾರದಲ್ಲಿ ಬಹಿರಂಗ; ಬಿಎಸ್‌ವೈ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದ ಸಚಿವರು, ಶಾಸಕರ ವಿರುದ್ಧದ ಹಗರಣಗಳನ್ನು ಒಂದು ...

news

ಮಾತೆ ಮಹಾದೇವಿ ಹೇಳಿಕೆಗೆ ಪ್ರತಿಕ್ರಿಯೆ ನೀಡೋಲ್ಲ: ಯಡಿಯೂರಪ್ಪ

ವಿಜಯಪುರ: ಸಿದ್ದಗಂಗಾಶ್ರೀ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾತೆ ಮಹಾದೇವಿ ಹೇಳಿಕೆ ಸಂಬಂಧ ಯಾವುದೇ ...

news

ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸ್ಕೇಚ್ ಹಾಕಿದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸ್ಕೇಚ್ ಹಾಕಿದ ಪತ್ನಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ...

Widgets Magazine