ವಾಸದ ಮನೆಯ ಹೊರಗೆ ಮತ್ತು ಮನೆಯ ಒಳಗಿದ್ದ 2 ಗ್ಯಾಸ್ ಸಿಲಿಂಡರ್ಗಳು ಸ್ಪೋಟಗೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯ ರಾತ್ರಿ 2.45 ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಸ್ಪೋಟಗೊಂಡಿದೆ. ಮನೆಯಿಂದ ಹೊರಗೋಡಿ ಬಂದು ಮೂವರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ