ಬೆಂಗಳೂರು, ರಾಜ್ಯದಲ್ಲಿ ರಾಜ್ಯ ಸರ್ಕಾರದ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿಗಳ ಸಮೂಹವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿಯೊಂದನ್ನು ಸಲ್ಲಿಸಿದ್ದು, ರಾಜ್ಯದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಕ್ಷ ಐಎಎಸ್ ಅಧಿಕಾರಿ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿದ್ದಾರೆ ಎನ್ನಲಾಗಿದೆ.