ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಮತ್ತು ಚುನಾವಣಾ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವ ಪಡೆದಿರುವ ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕ ಘೋಷಿಸಲಿದೆ. ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷವು ಚಟುವಟಿಕೆ ಚುರುಕುಗೊಳಿಸಿದ್ದು, ಪಂಜಾಬ್ ಮಾದರಿಯ ಫಲಿತಾಂಶ ಮರುಕಳಿಸುವ ವಿಶ್ವಾಸದಲ್ಲಿದೆ. ಲೋಕಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಶೀಘ್ರದಲ್ಲಿಯೇ ನಡೆಯುವ ಚುನಾವಣೆಗಳ ಮೇಲೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ