ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಡಿಸಿಎಂ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಹಿರಿಯ ರಾಜಕಾರಣಿಗಳಾಗಿದ್ದು, ಅವರು ಈ ರೀತಿ ಕೀಳಾಗಿ ಮಾಡನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಹೀಗಂತ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.ವೀರ ಸಾವರಕರ್ ಬಗ್ಗೆ ಸಿದ್ದರಾಮಯ್ಯ ನೀಡಿರೋ ಹೇಳಿಕೆ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ. ಅವರು ಹಿರಿಯರಾಗಿದ್ದು ವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು