ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ: ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ

ಶಿವಮೊಗ್ಗ:, ಸೋಮವಾರ, 10 ಜುಲೈ 2017 (13:09 IST)

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
 
ಯುವಕಾಂಗ್ರೆಸ್ ಘಟಕದ ನೂರಾರು ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ ನಂತರ ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ ಹಾಕಿ, ಕೂಡಲೇ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ, ರೈತರ ಸಾಲ ಮನ್ನಾ ಮಾಡಿಸುವಂತೆ ಘೋಷಣೆಗಳನ್ನು ಕೂಗಿದರು.
 
ರಾಜ್ಯ ಸರಕಾರ ಸಹಕಾರಿ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿದ್ದು, ಅದರಂತೆ ಕೇಂದ್ರ ಸರಕಾರ ಕೂಡಾ ರಾಷ್ಟ್ರ್ರೀಕೃತ ಬ್ಯಾಂಕ್‌‌ಗಳಲ್ಲಿರುವ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
 
ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರಿಂದ, ಅವರ ನಿವಾಸದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಿಮ್ಮವರಿಗೆ ಮೆಡಿಕಲ್ ವೀಸಾ ಕೊಟ್ಟಿದ್ದೀವಿ, ಜಾಧವ್ ತಾಯಿಗೆ ವೀಸಾ ಕೊಟ್ಟಿಲ್ಲವೇಕೆ..? ಪಾಕಿಸ್ತಾನಕ್ಕೆ ಸುಷ್ಮಾ ಸ್ವರಾಜ್ ಪ್ರಶ್ನೆ

ಪಾಕಿಸ್ತಾನದ ಕ್ಯಾನ್ಸರ್ ಪೀಡಿತ ಮಹಿಳೆಯೊಬ್ಬರು ಭಾರತದಲ್ಲಿ ಚಿಕಿತ್ಸೆ ಪಡೆಯಲು ಮೆಡಿಕಲ್ ವೀಸಾ ನೀಡುವಂತೆ ...

news

ಸುಮ್ಮನೆ ಕುಳಿತುಕೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಯವರು ಷಂಡರಲ್ಲ: ಶೋಭಾ ಕರಂದ್ಲಾಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದವರ ಹತ್ಯೆ ನಡೆಯುತ್ತಿದೆ. ಇಷ್ಟು ದಿನಗಳಾದರೂ ಕ್ರಮ ...

news

ಪಾಕ್ ನಿಂದ ಮರಳಿರುವ ಯುವತಿಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ರಿಂದ ಕನ್ಯಾದಾನ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಲಹೆ ಮೇರೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ...

news

ಮಂಗಳೂರಿನ ಕೊಲೆಗೆ ಸಚಿವ ರೈ, ಸಿಎಂ ಜವಾಬ್ದಾರರು: ಯಡಿಯೂರಪ್ಪ

ತುಮಕೂರು: ಮಂಗಳೂರಿನಲ್ಲಿ ನಡೆದ ಕೊಲೆಗೆ ಸಚಿವ ರಮಾನಾಥ್ ರೈ ಮತ್ತು ಸಿಎಂ ಸಿದ್ದರಾಮಯ್ಯ ...

Widgets Magazine