1 ಕೋಟಿ ಲಂಚಕ್ಕೆ ಬೇಡಿಕೆ: ಸಿಸಿಬಿ ಸಬ್ಇನ್ಸಪೆಕ್ಟರ್ ಸಸ್ಪೆಂಡ್

ಬೆಂಗಳೂರು, ಶನಿವಾರ, 12 ಜನವರಿ 2019 (17:12 IST)

  ಜನರಿಗೆ ಮೋಸ ಮಾಡಿದ್ದ ಕಂಪನಿ ಬಳಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಿಸಿಬಿಯ ಸಬ್ಇನ್ಸ್ಪೆಕ್ಟರ್ ಮತ್ತು ಮುಖ್ಯಪೇದೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಿಸಿಬಿಯ ಸಂಘಟಿತ ಅಪರಾಧ ದಳದ(ಓಸಿಡ್ಲ್ಯೂ)ಸಬ್ಇನ್ಸ್ಪೆಕ್ಟರ್ ಪ್ರಕಾಶ್, ಮುಖ್ಯಪೇದೆ ಸತೀಶ್ ಅವರನ್ನು ಅಮಾನತ್ತುಗೊಳಿಸಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್  ಆದೇಶ ಹೊರಡಿಸಿದ್ದಾರೆ.

ತಿಂಗಳಿಗೆ ಅಧಿಕ ಲಾಭಾಂಶ ನೀಡುವುದಾಗಿ ಸಾರ್ವಜನಿಕರಿಂದ ಸುಮಾರು 65 ಕೋಟಿ ಹೂಡಿಕೆ ಮಾಡಿಸಿಕೊಂಡಿದ್ದ ಜಯನಗರದಲ್ಲಿ ಕಚೇರಿ ಹೊಂದಿದ್ದ ಎಐಎಂಎಂಎಸ್ ಕಂಪನಿ ಸಾವಿರಾರು ಮಂದಿಗೆ ವಂಚನೆ ನಡೆಸಿತ್ತು.
ಸಂಬಂಧ ಬಂದ ದೂರುಗಳಿಂದ ಮಾಹಿತಿ ಪಡೆದು ವಿಚಾರಣೆ ನೆಪದಲ್ಲಿ ಎಐಎಂಎಂಎಸ್ ಕಂಪನಿಯವರ ಬಳಿ ಸಬ್ ಇನ್ಸ್ಪೆಕ್ಟರ್ ಪ್ರಕಾಶ್, ಮುಖ್ಯಪೇದೆ ಸತೀಶ್ 1 ಕೋಟಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 35 ಲಕ್ಷ ಹಣ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸತ್ಯಾ ಸತ್ಯತೆ ಪರಿಶೀಲಿಸಿದ ಡಿಸಿಪಿ ಗಿರೀಶ್ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಾಬೀತಾಗಿದ್ದರಿಂದ  ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಇಬ್ಬರನ್ನ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆಪರೇಷನ್ ಕಮಲಕ್ಕೆ ಬಿಜೆಪಿ ಸಜ್ಜು?

ದೆಹಲಿಯಲ್ಲಿ ಆರಂಭವಾಗಿರುವ ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಶಾಸಕರು ದೆಹಲಿ ...

news

ಸಾಗುವಾನಿ ತುಂಡು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಅಕ್ರಮವಾಗಿ ಸಾಗುವಾನಿ ತುಂಡುಗಳನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನ ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ...

news

ಗಮನ ಸೆಳೆದ ವಿವೇಕ ಜಾಥಾ!

ದೇಶ ಕಂಡ ಮಹಾನ್ ತತ್ವಜ್ಞಾನಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯನ್ನ ಸಂಭ್ರಮದಿಂದ ಆಚರಿಸಲಾಯಿತು.

news

ರಂಗಭೂಮಿ ಶಾಶ್ವತ ಕಲೆ ಎಂದ ನಟ!

ರಂಗಭೂಮಿ ಶಾಶ್ವತ ಕಲೆಯಾಗಿದೆ. ಸಿನಿಮಾ ಧಾರಾವಾಹಿಗಳ ಕಡೆ ಜನರ ಆಸಕ್ತಿ ಕಡಿಮೆಯಾಗುತ್ತಿದೆ. ಹೀಗಂ ನಟ ರಮೇಶ ...