ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆ ಮೇಲೆ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಬರೋಬ್ಬರಿ ನಾಲ್ಕು ದಿನಗಳ ಕಾಲ ಡಿಕೆಶಿವಕುಮಾರ್ ನಿವಾಸ, ಮಾವನ ಮನೆ, ಆಪ್ತ ಜ್ಯೋತಿಷಿ ಮನೆಯಲ್ಲಿ ತಪಾಸಣೆ ನಡೆಸಿದ್ದ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಖಲೆ ವಶಪಡಿಸಿಕೊಂಡಿದ್ದರು.ಆದರೆ ಮುಂದಿನ ಎರಡು ದಿನಗಳ ಕಾಲ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವರು ಐಟಿ ಇಲಾಖೆಗೆ ತಿಳಿಸಿದ್ದಾರೆ ಎನ್ನಲಾಗಿದೆ.