ಐಟಿ ದಾಳಿಗೆ ಪ್ರತಿಕ್ರಿಯೆ ನೀಡಬೇಡಿ: ಬಿಜೆಪಿ ನಾಯಕರಿಗೆ ಹೈಕಮಾಂಡ್ ಕಟ್ಟಾಜ್ಞೆ

ಬೆಂಗಳೂರು, ಬುಧವಾರ, 2 ಆಗಸ್ಟ್ 2017 (15:07 IST)

ಇಂಧನ ಸಚಿವ ಡಿ.ಕೆ.ಶಿವಕುಮಾಪ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ ಎಂದು ಬಿಜೆಪಿ ಹೈಕಮಾಂಡ್ ಕಟ್ಟಾಜ್ಞೆ ಹೊರಡಿಸಿದೆ.
 
ರಾಜ್ಯ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಲ್ಲದೇ, ಯಾವುದೇ ಮಾಧ್ಯಮದಲ್ಲಿ ಚರ್ಚಾಕೂಟದಲ್ಲಿ ಪಾಲ್ಗೊಳ್ಳಬಾರದು ಎಂದು ಆದೇಶ ಹೊರಡಿಸಿದೆ.
 
ಇಂದು ಬೆಳಿಗ್ಗೆ ಏಕಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅವರ ಮಾವನನ್ನು ಕೂಡಾ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ದಾಳಿಯ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮೌನಕ್ಕೆ ಶರಣಾಗುವಂತೆ ಹೈಕಮಾಂಡ್ ಆದೇಶ ನೀಡಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿಕೆಶಿ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ತೀವ್ರ ವಿಚಾರಣೆ

ಬೆಂಗಳೂರು, ರಾಮನಗರ ಮಾತ್ರವಲ್ಲ. ನವದೆಹಲಿಯಲ್ಲೂ ಡಿ.ಕೆ. ಶಿವಕುಮಾರ್`ಗೆ ಸಂಬಂಧಿತ ವ್ಯಕ್ತಿಗಳ ಮೇಲೆ ಐಟಿ ...

news

ಕಾಂಗ್ರೆಸ್ ಕಾರ್ಯಕರ್ತರ ಧರಣಿ: ಮೋದಿ, ಅಮಿತ್ ಶಾ ಪ್ರತಿಕೃತಿ ದಹನ

ಬೆಂಗಳೂರು: ಇಂಧ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಪ್ರಧಾನಿ ಮೋದಿ, ...

news

ಐಟಿ ದಾಳಿ ಬಗ್ಗೆ ಡಿ.ಕೆ. ಸುರೇಶ್ ಮೊದಲ ಪ್ರತಿಕ್ರಿಯೆ

ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ...

news

ಐಟಿ ದಾಳಿಯಂತಹ ಗೊಡ್ಡು ಬೆದರಿಕೆಗಳಿಗೆ ಮಣಿಯೋಲ್ಲ: ಸಿಎಂ ಗುಡುಗು

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲೆ ನಡೆಸಿರುವ ದಾಳಿಯಲ್ಲಿ ಕೇಂದ್ರದ ...

Widgets Magazine