ವೈದ್ಯರೇ ಮುಷ್ಕರ ಕೈಬಿಡಿ: ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು, ಗುರುವಾರ, 16 ನವೆಂಬರ್ 2017 (11:51 IST)

ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೂಡಲೇ ಮುಷ್ಕರ ಕೈಬಿಡಿ ಎಂದು ಮನವಿ ಮಾಡಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಅಧಿವೇಶನದಲ್ಲಿ ಕೆಪಿಎಂಇ ಮಸೂದೆ ಮಂಡಿಸಿಲ್ಲ. ಸರ್ವಪಕ್ಷಗಳೊಂದಿಗೆ ಮತ್ತು ವೈದ್ಯರೊಂದಿಗೆ ಚರ್ಚೆ ನಡೆಸಿದ ನಂತರವಷ್ಟೆ ಮಂಡನೆಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
 
ಖಾಸಗಿ ವೈದ್ಯರೊಂದಿಗೆ ನಡೆದ ಚರ್ಚೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇನೆ. ಯಾವುದೇ ಕಾರಣಕ್ಕೂ ನಿಮಗೆ ಮಾಹಿತಿ ನೀಡದೆ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸುವುದಿಲ್ಲ ಎಂದು ತಿಳಿಸಿದ್ದೇನೆ.
 
ಕೇವಲ ಉಹಾಪೋಹ ವರದಿಗಳ ಆಧಾರದ ಮೇಲೆ ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಇದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತದೆ. ಕೂಡಲೇ ಮುಷ್ಕರ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಾಡೂಟಕ್ಕಾಗಿ ಹೆದ್ದಾರಿಯನ್ನೇ ಬಂದ್ ಮಾಡಿದ ಶಾಸಕ

ಕೋಲಾರ: ಬಾಡೂಟ ಆಯೋಜನೆಗಾಗಿ ಹೆದ್ದಾರಿ ರಸ್ತೆಯನ್ನೇ ಬಂದ್ ಮಾಡಿ ಶಾಸಕ ವರ್ತೂರ್ ಪ್ರಕಾಶ್ ವಿರುದ್ಧ ...

news

ಮಾಧ್ಯಮ ಪ್ರತಿನಿಧಿಗಳಿಗೆ ತಲೆ ಕೆಟ್ಟಿದೆಯೇ: ನಾಲಿಗೆ ಹರಿಬಿಟ್ಟ ಈಶ್ವರಪ್ಪ

ಬೆಂಗಳೂರು: ಖಾಸಗಿ ವೈದ್ಯರ ಮುಷ್ಕರ ಕುರಿತಂತೆ ಬಿಜೆಪಿ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎನ್ನುವ ...

news

ವೈದ್ಯರ ಮುಷ್ಕರ,,ರೋಗಿಗಳ ಪರದಾಟ..18ಕ್ಕೂ ಹೆಚ್ಚು ಸಾವು

ಬೆಂಗಳೂರು: ಖಾಸಗಿ ವೈದ್ಯರ ಮುಷ್ಕರ ಮುಂದುವರಿದಿದ್ದು ರೋಗಿಗಳ ಪರದಾಟ ತಾರಕ್ಕಕೇರಿದೆ. ಈಗಾಗಲೇ ರೋಗಿಗಳ ...

news

ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಮನವಿ

ಬೆಂಗಳೂರು: ಖಾಸಗಿ ವೈದ್ಯರಿಗೆ ಕಡಿವಾಣ ಹಾಕುವಂತಹ ವಿಧೇಯಕ ಮಂಡಿಸಲು ಹೊರಟಿರುವ ಸರ್ಕಾರದ ವಿರುದ್ಧ ಮುಷ್ಕರ ...

Widgets Magazine
Widgets Magazine