ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಜೆಡಿಎಸ್ ಪಕ್ಷ ಇದೀಗ ಬಿಬಿಎಂಪಿ ಚುನಾವಣೆಗೆ ಭರ್ಜರಿ ತಾಲಿಮು ನಡೆಸುತ್ತಿದೆ..ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜೊತೆ ಇಂದು ಸಮಾಲೋಚನೆ ನಡೆಸಿದರು.