ದಾವಣಗೆರೆ: ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಕರುಣಾಕರ ರೆಡ್ಡಿ ಹಾಗೂ ಶಾಸಕ ಎಂ.ಪಿ ರವೀಂದ್ರ ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಇಬ್ಬರೂ ನಾಯಕರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.