ರಾಜ್ಯದಲ್ಲಿ ಇದೇ ಮೊದಲ ಬಾರಿ ಸರ್ಕಾರಿ ಸ್ವಾಮ್ಯದಲ್ಲಿ ಪ್ರಾರಂಭವಾಗಿರುವ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸುಸಜ್ಜಿತ ‘ಮಾವು ಸಂಸ್ಕರಣಾ ಘಟಕ’ ಮೊದಲ ವರ್ಷವೇ 25 ಟನ್ ಮಾವಿನ ಹಣ್ಣು ಸಂಸ್ಕರಿಸಿ ವಿವಿಧ ದೇಶಗಳಿಗೆ ರಫ್ತು ಮಾಡಿದೆ.