ತಂದೆಯಿಂದಲೇ ಪುತ್ರಿಯ ಮೇಲೆ ನಿರಂತರ ಅತ್ಯಾಚಾರ

ಕೋಲಾರ, ಸೋಮವಾರ, 15 ಮೇ 2017 (13:35 IST)

Widgets Magazine
rape attempt

ಕಾಮುಕ ತಂದೆಯೊಬ್ಬ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿ ಇದೀಗ ಪೊಲೀಸರ ಅತಿಥಿಯಾದ ಹೇಯ ಘಟನೆ ವರದಿಯಾಗಿದೆ.
 
ಪತ್ನಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಆರು ತಿಂಗಳುಗಳಿಂದ ಅತ್ಯಾಚಾರವೆಸಗಿದ್ದಾನೆ. ತಾಯಿಗೆ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
 
ಬಾಲಕಿ ಹೊಟ್ಟೆ ನೋವು ಎಂದು ನರಳುತ್ತಿರುವುದು ಕಂಡ ಆಕೆಯ ತಾಯಿ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಆಸ್ಪತ್ರೆಯಲ್ಲಿ ವೈದ್ಯರು ಬಾಲಕಿ ಗರ್ಭವತಿಯಾಗಿದ್ದಾಳೆ ಎನ್ನುವ ಆಘಾತಕಾರಿ ಸಂಗತಿ ಬಹಿರಂಗಪಡಿಸಿದ್ದಾರೆ.
 
ಬಾಲಕಿಯ ವಿಚಾರಣೆ ನಡೆಸಿದಾಗ ತಂದೆಯ ಹೇಯ ಕೃತ್ಯವನ್ನು ಬಿಚ್ಚಿಟ್ಟಿದ್ದಾಳೆ. ಆರೋಪಿಯ ವಿರುದ್ಧ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈ ಶಾಸಕನ ಭರ್ಜರಿ ಕೊಡುಗೆ

ಲಕ್ನೋ: ಬಿಜೆಪಿ ಮತ್ತು ಹಿಂದೂ ಸಂಘಟನೆಗಳನ್ನು ಬಿಟ್ಟರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಯಾರೂ ...

news

ಇಷ್ಟು ದಿನ ಎಲ್ಲಿ ಹೋಗಿದ್ದೀರಿ? ಬರಗಾಲವಿರುವುದು ಗೊತ್ತಿಲ್ಲವೇ?: ಈಶ್ವರಪ್ಪಗೆ ಸಿಎಂ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಬರಗಾಲವಿರುವುದು ಬಿಜೆಪಿಯವರಿಗೆ ತಿಳಿದಿರಲಿಲ್ಲವೇ? ಇಷ್ಟು ದಿನ ಎಲ್ಲಿ ...

news

ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ನಗರದ ಸಿಲ್ಕ್‌ಬೋರ್ಡ್ ಬಳಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದ ಯುವತಿಯ ಮೇಲೆ ಆರೋಪಿಯೊಬ್ಬ ಲೈಂಗಿಕ ...

news

ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ ನಕಲಿ ಸ್ಕೀಮ್! ಮೋಸ ಹೋಗಬೇಡಿ!

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಪೇಯಿ ಮತ್ತು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ...

Widgets Magazine